ಭಾರತ-ನ್ಯೂಜಿಲೆಂಡ್ ದ್ವಿತೀಯ ಟೆಸ್ಟ್ ನಾಳೆಯಿಂದ

ಶುಕ್ರವಾರ, 28 ಫೆಬ್ರವರಿ 2020 (08:47 IST)
ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆಯಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈಗಾಗಲೇ ಸರಣಿಯಲ್ಲಿ 1-0 ಯಿಂದ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.


ಇಂದಿನ ಪಂದ್ಯ ಡ್ರಾ ಮಾಡಿಕೊಂಡರೂ ಸರಣಿ ನ್ಯೂಜಿಲೆಂಡ್ ಪಾಲಾಗಲಿದೆ. ಒಂದೆಡೆ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಅಂಕ ಕಾಪಾಡಿಕೊಳ್ಳುವ ಒತ್ತಡವಾದರೆ, ಈಗಾಗಲೇ ಏಕದಿನ ಸರಣಿ ಸೋತಿರುವ ಕಾರಣ ಪ್ರತಿಷ್ಠೆ ಉಳಿಸಿಕೊಳ್ಳಲು ಈ ಪಂದ್ಯದಲ್ಲಿ ಗೆದ್ದು ಸರಣಿ ಉಳಿಸಿಕೊಳ್ಳುವ ತವಕ ಟೀಂ ಇಂಡಿಯಾದ್ದಾಗಿದೆ.

ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದಾಗಿದೆ. ಆರಂಭಿಕರಾಗಿ ಶಬ್ನಂ ಗಿಲ್ ಅವಕಾಶ ಪಡೆಯುವ ಸಾಧ‍್ಯತೆಯಿದೆ. ವಿಕೆಟ್ ಕೀಪರ್ ಸ್ಥಾನಕ್ಕೆ ವೃದ್ಧಿಮಾನ್ ಸಹಾಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಉಳಿದಂತೆ ಬೌಲಿಂಗ್ ನಲ್ಲಿ ಬದಲಾವಣೆ ಸಾಧ‍್ಯತೆ ಕಡಿಮೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 4 ಗಂಟೆಗೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ