ಪಾಕಿಸ್ತಾನಕ್ಕೆ ನವಾಜ್ ಶರೀಫ್ ಸಹೋದರ ಶಹಬಾಜ್ ಪ್ರಧಾನಿ: ಹಿನ್ನಲೆಯೇನು?

Krishnaveni K

ಬುಧವಾರ, 14 ಫೆಬ್ರವರಿ 2024 (09:52 IST)
Photo Courtesy: Twitter
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಸಹೋದರ ಶಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.

ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷದ ಅಧ್ಯಕ್ಷರಾಗಿರುವ ಶಹಬಾಜ್‍ ಷರೀಫ್ ರನ್ನು ಪ್ರಧಾನಿ ಹುದ್ದೆಗೆ ಅವರ ಪಕ್ಷ ನಾಮನಿರ್ದೇಶನ ಮಾಡಿದೆ.  ಸ್ವತಃ ನವಾಜ್ ಷರೀಫ್ ಅವರೇ ಶಹಬಾಜ್ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ. ಪುತ್ರಿ ಮರ್ಯಮ್ ರನ್ನು ಪಂಜಾಬ್ ಮುಖ್ಯಮಂತ್ರಿ ಹುದ್ದೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ವಿಚಾರವನ್ನು ಪಕ್ಷದ ವಕ್ತಾರರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ (ಪಿಟಿಐ) ಪಿಎಂಎಲ್-ಎನ್ ಜೊತೆಗೂಡಿ ಸಮ್ಮಿಶ್ರ ಸರ್ಕಾರ ರಚಿಸಲಿದೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೊ ಜರ್ದಾರಿ ಅವರು ತಮ್ಮ ತಂದೆ ಆಸಿಫ್ ಅಲಿ ಜರ್ದಾರಿ ಅವರನ್ನು ಮತ್ತೆ ಅಧ‍್ಯಕ್ಷರನ್ನಾಗಿ ಮಾಡುವುದಾಗಿ ಹೇಳಿದ್ದಾರೆ. ಈ ಮೊದಲು ಜರ್ದಾರಿ 2008 ರಿಂದ 2013 ರವರೆಗೆ ಪಾಕ್ ಅಧ‍್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಶಹಬಾಜ್ ಯಾರು?
ಪಾಕ್ ನೂತನ ಪ್ರಧಾನಿಯಾಗಲಿರುವ ಶಹಬಾಜ್ ಮಾಜಿ ಪ್ರಧಾನಿ ನವಾಜ್ ಷರೀಫ್ ಸಹೋದರ. 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. ಪಾಕಿಸ್ತಾನ್ ಮುಸ್ಲಿಂ ಲೀಗ್-ಎನ್ ಅಧ್ಯಕ್ಷರಾಗಿದ್ದರು. ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದ ಅನುಭವವಿದೆ. 1999 ರಲ್ಲಿ ಮಿಲಿಟರಿ ದಂಗೆಯ ನಂತರ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ, ಶೆಹಬಾಜ್ ತನ್ನ ಕುಟುಂಬದೊಂದಿಗೆ ಸೌದಿ ಅರೇಬಿಯಾಕ್ಕೆ ಶಿಫ್ಟ್ ಆಗಿದ್ದರು. 2007 ರಲ್ಲಿ ಪಾಕಿಸ್ತಾನಕ್ಕೆ ಮರಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ