‘ಪುಷ್ಪಾ’ ಚಿತ್ರಕ್ಕಾಗಿ ನಿರ್ದೇಶಕ ಸುಕುಮಾರ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಸೋಮವಾರ, 25 ಜನವರಿ 2021 (10:15 IST)
ಹೈದರಾಬಾದ್ : ನಿರ್ದೇಶಕ ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ನಟಿಸಿರುವ ‘ಪುಷ್ಪಾ’ ಚಿತ್ರವನ್ನು ಭಾರೀ ಬಜೆಟ್ ನಲ್ಲಿ ನಿರ್ಮಿಸಿ  ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.

ಈ ಚಿತ್ರ ಶ್ರೀಗಂಧದ ಕಳ್ಳಸಾಗಣಿಯ ವಿರುದ್ಧವಾಗಿ ಆಕ್ಷನ್ ಥ್ರಿಲ್ಲರ್ ದೃಶ್ಯಗಳನ್ನು ಹೊಂದಿದೆ. ಪ್ರಸ್ತುತ ಈ ಚಿತ್ರವನ್ನು ಗೋದಾವರಿ ಜಿಲ್ಲೆಯ ರಾಂಪಚೋದವರಂ ಮಾರೆಡುಮಿಲ್ಲಿ ಅರಣ್ಯದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರವನ್ನು 180 ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುತ್ತಿದೆ.

ಹಾಗೇ ನಿರ್ದೇಶಕ ಸುಕುಮಾರ್ ಅವರು ಈ ಚಿತ್ರಕ್ಕಾಗಿ 23 ಕೋಟಿ ರೂ. ಸಂಭಾವನೆ ಪಡೆದಿದ್ದು, 150 ದಿನಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದ್ದಾರೆ.  ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮುಂದಿನ  ವರ್ಷ ಸಂಕ್ರಾಂತಿಗೆ ಬಿಡುಗಡೆ  ಮಾಡಲು ಯೋಜಿಸಲಾಗಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ