ಬಾಲಿವುಡ್ ಗೆ ಹಾರಿದ ರಶ್ಮಿಕಾ ಮಂದಣ್ಣ: ಹೊಸ ಸಿನಿಮಾ ಅನೌನ್ಸ್

ಗುರುವಾರ, 24 ಡಿಸೆಂಬರ್ 2020 (08:57 IST)
ಬೆಂಗಳೂರು: ಇದುವರೆಗೆ ಟಾಲಿವುಡ್ ನಲ್ಲಿ ಮಿಂಚಿದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಚೊಚ್ಚಲ ಬಾಲಿವುಡ್ ಸಿನಿಮಾ ಅನೌನ್ಸ್ ಆಗಿದೆ.


ಸಿದ್ಧಾರ್ಥ್ ಮಲ್ಹೋತ್ರ ನಾಯಕರಾಗಿರುವ ಮಿಷನ್ ಮಂಜು ಎಂಬ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ನಿನ್ನೆ ಬಿಡುಗಡೆಯಾಗಿದ್ದು, ರಶ್ಮಿಕಾ ಬಾಲಿವುಡ್ ನಲ್ಲಿ ಅಭಿನಯಿಸುತ್ತಿರುವ ಸುದ್ದಿ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಬಾಲಿವುಡ್ ಗೆ ಪದಾರ್ಪಣೆ ಮಾಡುತ್ತಿರುವುದಕ್ಕೆ ಸ್ವತಃ ರಶ್ಮಿಕಾ ಕೂಡಾ ಎಕ್ಸೈಟ್ ಆಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ