
	ರಾಯಚೂರು, ಬಾಗಲಕೋಟೆ, ಯಾದಗಿರಿ, ಕೊಪ್ಪಳ ಸೇರಿದಂತೆ7 ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಕೃಷ್ಣಾ ಮೇಲ್ದಂಡೆ  ಯೋಜನೆ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕಿದೆ ಎಂದು ರೈತರು ಒತ್ತಡ ಹೇರುತ್ತಿದ್ದಾರೆ. 
ಕೃಷ್ಣಾ ನದಿ 173 ಟಿಎಂಸಿ ನೀರು ಬಳಕೆಗೆ ಅಧಿಸೂಚನೆ ಹೊರಡಿಸಬೇಕಿದೆ. ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ರೈತರು ಮನವಿ ಮಾಡಿದ್ದಾರೆ.
 
		
