ಬೆಂಗಳೂರಿಗೆ ಬಿಗ್ ಶಾಕ್; ಮತ್ತೆರಡು ಕೊರೊನಾ ಪಾಸಿಟಿವ್ ಕೇಸ್ ದಾಖಲು

ಬುಧವಾರ, 6 ಮೇ 2020 (10:39 IST)
ಬೆಂಗಳೂರು : ಬೆಂಗಳೂರಿಗೆ ಬಿಗ್ ಶಾಕ್. ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ.


ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕನ ಪತ್ನಿ ಹಾಗೂ ಮಕ್ಕಳಿಗೂ ವೈರಸ್ ತಗುಲಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಅಲ್ಲದೆ  ಇಕೋಬಾ ನಗರದ ಗರ್ಭಿಣಿಗೆ ಕೊರೊನಾ ಪತ್ತೆಯಾಗಿದ್ದು, ಈ ಹಿನನ್ಲೆಯಲ್ಲಿ ಇಕೋಬಾ ನಗರವನ್ನು ಸೀಲ್ ಡೌನ್ ಮಾಡಲಾಗಿದ್ದು, ನಗರದದ ಸುತ್ತಮುತ್ತ ಜನರ ಸಂಚಾರಕ್ಕೆ ಆರೋಗ್ಯ ಇಲಾಖೆ ನಿರ್ಬಂಧ ಹೇರಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 13 ಮಂದಿಯನ್ನು ಕ್ವಾರಂಟೈನ್ ನಲ್ಲಿಡಲಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ