ಹೊಸಕೋಟೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಮಂಗಳವಾರ, 11 ಫೆಬ್ರವರಿ 2020 (11:10 IST)
ಹೊಸಕೋಟೆ : ಸ್ಥಳೀಯ ನಗರ ಸಂಸ್ಥೆಗಳಿಗೆ ನಡೆದ ಚುನಾವಣೆ ಮತ್ತು ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ನೇತೃತ್ವದ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಹೊಸಕೋಟೆಯ ಶಾಸಕ ಶರತ್ ಬಚ್ಚೇಗೌಡರ ಬೆಂಬಲಿತ ಅಭ್ಯರ್ಥಿಗಳು 7ರಲ್ಲಿ ಗೆಲುವು ಸಾಧಿಸಿದರೆ, ಜೆಡಿಎಸ್ 3 ರಲ್ಲಿ ಜಯ ಗಳಿಸಿದೆ. ಕಾಂಗ್ರಸ್ ಪಕ್ಷ ಶೂನ್ಯ ಖಾತೆ ತೆರೆದಿದೆ.

 

ಆದರೆ ಎಂಟಿಬಿ ನಾಗರಾಜ್ ನೇತೃತ್ವದ ಬಿಜೆಪಿ ಪಕ್ಷ 18 ಸ್ಥಾನ ಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕಾರದ ಗದ್ದುಗೆ ಏರಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ