ಪ್ರೇಯಸಿಯಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್; ಪ್ರಿಯಕರ ಆತ್ಮಹತ್ಯೆ

ಶುಕ್ರವಾರ, 28 ಫೆಬ್ರವರಿ 2020 (11:22 IST)
ಬೆಳಗಾವಿ : ಪ್ರೇಯಸಿಯಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಹಿನ್ನಲೆ ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ  ಮಂಗಳೂರಿನ ಸೋಮೇಶ್ವರ ರೈಲ್ವೆ ನಿಲ್ದಾಣ ಬಳಿ ನಡೆದಿದೆ.


ಬೆಳಗಾವಿಯ 23 ವರ್ಷದ ಸಮ್ಮದ್ ರಾಯಗೌಡ ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರೇಯಸಿಯಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರಿಂದ ಮನನೊಂದ ಸಮ್ಮದ್ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಈ  ಘಟನೆಗೆ ಸಂಬಂಧಿಸಿದಂತೆ ಉಳ‍್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ