15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ; ರಾಜ್ಯ ಕಾಂಗ್ರೆಸ್ ನಿಂದ 10 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಗುರುವಾರ, 26 ಸೆಪ್ಟಂಬರ್ 2019 (16:59 IST)
ಬೆಂಗಳೂರು : ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ರಾಜ್ಯ ಕಾಂಗ್ರೆಸ್, 15 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು  ಸಿದ್ಧಪಡಿಸಿದೆ.




ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷಯ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಹಲವು ಮುಖಂಡರು ಪಾಲ್ಗೊಂಡು ಚರ್ಚೆ ನಡೆಸಿ 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗಳಿಸಿದ್ದಾರೆ. ಆದರೆ ಅನರ್ಹ ಶಾಸಕರ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ನೋಡಿಕೊಂಡು ಅಂತಿಮ ಪಟ್ಟಿ ಸಿದ್ಧಪಡಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.


10 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿವೆ:
ಹೊಸಕೋಟೆ-ಪದ್ಮಾವತಿ ಸುರೇಶ್, ಕೆಆರ್ ಪುರಂ-ನಾರಾಯಣಸ್ವಾಮಿ, ಕೆಆರ್ ಪೇಟೆ-ಕೆಬಿ ಚಂದ್ರಶೇಖರ್, ಗೋಕಾಕ್-ಲಖನ್ ಜಾರಕಿಹೊಳಿ, ಕಾಗವಾಡ-ಪ್ರಕಾಶ್ ಹುಕ್ಕೇರಿ, ರಾಣಿ ಬೆನ್ನೂರು-ಕೆ.ಬಿ.ಕೋಳಿವಾಡ, ಹೊಸಕೋಟೆ-ಸೂರ್ಯ ನಾರಾಯಣರೆಡ್ಡಿ, ಹಿರೇಕೆರೂರು- ಬನ್ನಿಕೋಡ್, ಮಹಾಲಕ್ಷ್ಮಿ ಲೇಔಟ್-ಶಿವರಾಜ್ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದ್ದು, ಆದರೆ ಯಶವಂತಪುರ ಸೇರಿ 5 ಸ್ಥಾನಗಳಿಗೆ ಎರಡರಿಂದ, ಮೂವರು ಅಭ್ಯರ್ಥಿಗಳಲ್ಲಿ ಪೈಪೋಟಿ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ