ಕೊರೊನಾ ಎಫೆಕ್ಟ್ : ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ

ಶುಕ್ರವಾರ, 27 ಮಾರ್ಚ್ 2020 (14:25 IST)
ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಟ್ಕಳದಲ್ಲಿ `ಹೆಲ್ತ್ ಎಮರಜೆನ್ಸಿ ಘೋಷಿಸಲಾಗಿದೆ.

ಭಟ್ಕಳ ಅತೀ ಚಿಕ್ಕ ಪಟ್ಟಣವಾದರೂ ಇಲ್ಲಿ ವಿದೇಶದಿಂದ ಬಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೊರೊನಾ ಸೊಂಕು ವಿದೇಶದಿಂದ ಬಂದವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಭಟ್ಕಳದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದೆ. ಈ ಸೊಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಪರಿಸ್ಥಿತಿ ಕೈಮಿರದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಭಟ್ಕಳ ಪುರಸಭೆ, ಜಾಲಿ ತಾಲೂಕು ಪಂಚಾಯಿತಿ, ಶಿರಾಲಿ ಗ್ರಾಮ ಪಂಚಾಯಿತಿ, ಹೆಬ್ಳೆ ಗ್ರಾಮಪಂಚಾಯಿತಿ, ಮಾವಿನಕುರ್ವೆ ಗ್ರಾಮ ಪಂಚಾಯಿತಿ, ಮುಂಡಳ್ಳಿ ಗ್ರಾಮ ಪಂಚಾಯಿತಿ, ಯಲ್ವಾಡಿಕಾವೂರು ಗ್ರಾಮ ಪಂಚಾಯಿತಿ ಮತ್ತು ಮುತ್ತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕೂಡಲೇ ಜಾರಿ ಬರುವಂತೆ ಈ ಆರೋಗ್ಯ ತುರ್ತು ಪರಿಸ್ಥಿತಿ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ