ಕೊರೊನಾ ಎಫೆಕ್ಟ್ : ಫೋನ್ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ

ಶನಿವಾರ, 28 ಮಾರ್ಚ್ 2020 (21:17 IST)
ಮಾರಕ ಕೊರೋನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಮಾಡಲಾಗಿರುವುದರಿಂದಾಗಿ ಇದೀಗ ಸಾರ್ವಜನಿಕರಿಗೆ ಸಹಾಯವಾಣಿ ಆರಂಭಿಸಲಾಗಿದೆ.

ಹಾವೇರಿಯಲ್ಲಿ ಸಾರ್ವಜನಿಕರ ಸಮಸ್ಯೆ ಹಾಗೂ ದೂರುಗಳನ್ನು ಸ್ವೀಕರಿಸಿ ಸ್ಪಂದಿಸುವ ನಿಟ್ಟಿನಲ್ಲಿ ದಿನದ 24 ತಾಸು ಕಾರ್ಯನಿರ್ವಹಿಸಲು ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ.

ಟೋಲ್ ಫ್ರೀ ಸಹಾಯವಾಣಿ 08375-249102, 08375-249103, 08375-249104 ಗೆ ಸಾರ್ವಜನಿಕರು ಕರೆಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಸಾರ್ವಜನಿಕ ಸಮಸ್ಯೆಗಳನ್ನು ಸ್ವೀಕರಿಸಿ ಪ್ರತಿ ಕರೆಗಳನ್ನು ದಾಖಲಿಸಲಾಗುವುದು. ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ