SSLC, PUC, ITI ಆದವರಿಗೆ ನೇರ ಸಂದರ್ಶನ

ಸೋಮವಾರ, 24 ಫೆಬ್ರವರಿ 2020 (19:10 IST)
ಹೊಂಡಾ ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. 

ಸುಪರವೈಜರ್, ಕ್ವಾಲಿಟಿ ಇನ್ಸ್‍ಪೆಕ್ಟರ್, ಆಪರೇಟರ್ ಹಾಗೂ ಪೆಂಟರ್ಸ್  ಹಾಗೂ ಹೆಲ್ಪರ್ (ಒಟ್ಟು 250 ಹುದ್ದೆಗಳ) ನೇಮಕಾತಿಗಾಗಿ ಕಲಬುರಗಿ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನ  ಹಿಂದುಗಡೆಯಿರುವ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಫೆ. 26 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಹೀಗಂತ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅಭ್ಯರ್ಥಿಗಳ ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ., ಪಿಯುಸಿ., ಐಟಿಐ (ಎಲ್ಲ ಟ್ರೇಡ್), ಡಿಪ್ಲೋಮಾ ಮೆಕ್ಯಾನಿಕಲ್‍ದಲ್ಲಿ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಹಾಗೂ ಮೊಬೈಲ್ ಸಂಖ್ಯೆ 9538931619, 9071151984 ಗಳಿಗೆ ಸಂಪರ್ಕಿಸಬಹುದು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ