ಕನ್ನಡದ ಶಾಲು ಹೊದ್ದುಕೊಂಡು ಬಂದು ಮತದಾನ ಮಾಡಿದ ಡಿಕೆ ಶಿವಕುಮಾರ್

Krishnaveni K

ಶುಕ್ರವಾರ, 26 ಏಪ್ರಿಲ್ 2024 (15:25 IST)
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು ಈಗಾಗಲೇ ಹಲವು ರಾಜಕೀಯ ನಾಯಕರು ತಮ್ಮ ಹಕ್ಕು ಚಲಾಯಿಸಿದ್ದಾರೆ.
 

ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ತವರು ಸಾತನೂರಿನಲ್ಲಿ ಮತ ಚಲಾವಣೆ ಮಾಡಿದ್ದಾರೆ. ಈ ವೇಳೆ ಅವರು ಕನ್ನಡದ ಶಾಲು ಹೊದ್ದು ಬಂದಿದ್ದು ವಿಶೇಷವಾಗಿತ್ತು. ಡಿಕೆ ಶಿವಕುಮಾರ್ ಜೊತೆಗೆ ಅವರ ಸಹೋದರ ಡಿಕೆ ಸುರೇಶ್ ಕೂಡಾ ಇದ್ದರು. ಅವರೂ ಕನ್ನಡದ ಶಾಲು ಧರಿಸಿ ಬಂದಿದ್ದರು. ಮತ ಚಲಾವಣೆ ಬಳಿಕ ಡಿಕೆ ಬ್ರದರ್ಸ್ ಫೋಟೋಗೆ ಪೋಸ್ ನೀಡಿದ್ದಾರೆ.

ಡಿಕೆ ಸುರೇಶ್ ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ವಿರುದ್ಧ ಸ್ಪರ್ಧೆ ನಡೆಸುತ್ತಿದ್ದಾರೆ. ಈ ಲೋಕಸಭೆ ಕಣದ ಫಲಿತಾಂಶದ ಮೇಲೆ ಎಲ್ಲರ ಕುತೂಹಲವಿದೆ. ಹಾಲಿ ಸಂಸದರಾಗಿರುವ ಡಿಕೆ ಸುರೇಶ್ ಗೆ ಈ ಬಾರಿ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಮಣ್ಣು ಮುಕ್ಕಿಸುವ ವಿಶ್ವಾಸದಲ್ಲಿದ್ದಾರೆ.

ಇಂದು ಮತದಾನ ಮಾಡಿದ ಪ್ರಮುಖರಲ್ಲಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹಮ್ಮದ್ ಸೇರಿದಂತೆ ಅನೇಕ ಪ್ರಮುಖರು ಸೇರಿದ್ದಾರೆ. ಕರ್ನಾಟಕದಲ್ಲಿ ಇದುವರೆಗೆ 38.23 % ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ವೋಟಿಂಗ್ ನಡೆದಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ