ಪಿಯುಸಿ ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬುಧವಾರ, 26 ಫೆಬ್ರವರಿ 2020 (18:22 IST)
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 4 ರಿಂದ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯೋ ವಿದ್ಯಾರ್ಥಿಗಳು ಬಸ್ ನಲ್ಲಿ ಫ್ರೀಯಾಗಿ ಪ್ರಯಾಣ ಮಾಡಬಹುದು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ, ಪರೀಕ್ಷಾ ಕೇಂದ್ರಗಳವರೆಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಮಾರ್ಚ್ 4 ರಿಂದ 23ರವರೆಗೆ ನಡೆಯುವ ದ್ವಿತೀಯ ವರ್ಷದ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆಯಿಂದ ಹಿಂದಿರುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಎಲ್ಲ ವಿಭಾಗದ ಮತ್ತು ಘಟಕ ವ್ಯವಸ್ಥಾಪಕರಿಗೆ ಸೂಚನೆ ತಿಳಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು.  ಈ ಕುರಿತು ವಿದ್ಯಾರ್ಥಿಗಳು ತಮಗೆ ಏನಾದರೂ ತೊಂದರೆಯಾಗಿದ್ದಲ್ಲಿ ಸಂಬಂಧಪಟ್ಟ ವಿಭಾಗಗಳ ಸಂಚಾರ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕರು ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ