ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಗೆ ಸ್ಥಳೀಯರಿಂದ ಧರ್ಮದೇಟು

ಸೋಮವಾರ, 24 ಫೆಬ್ರವರಿ 2020 (11:05 IST)
ಬೆಳಗಾವಿ : ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನಿಗೆ ಸ್ಥಳೀಯರು ಹಿಗ್ಗಾಮಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗುರ್ಲಗುಂಜಿ ಗ್ರಾಮದಲ್ಲಿ ನಡೆದಿದೆ.


ಮೋಹನ್ ಸಾಥೇರಿ ಥಳಿತಕ್ಕೊಳಗಾದ ವ್ಯಕ್ತಿ. ಈತ ಮಹಿಳೆಯನ್ನು ಭೇಟಿಯಾಗಲು ಗ್ರಾಮಕ್ಕೆ ಬಂದಿದ್ದ ವೇಳೆ ಸ್ಥಳೀಯರೆಲ್ಲ ಸೇರಿ ಹಿಗ್ಗಾಮಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಆತನನ್ನು ಬಿಡಿಸಲು ಬಂದ ಮಹಿಳೆ ಮತ್ತು ಸಂಬಂಧಿಕರಿಗೂ ಸ್ಥಳೀಯರು ಥಳಿಸಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ