ಉಪಚುನಾವಣೆ ಗೆಲ್ಲಲು ಜೆಡಿಎಸ್ ನಿಂದ ರಣತಂತ್ರ; ಇಂದು ಜೆಡಿಎಸ್ ಶಾಸಕಾಂಗ ಸಭೆ ಕರೆದ ಹೆಚ್.ಡಿಕೆ

ಸೋಮವಾರ, 19 ಅಕ್ಟೋಬರ್ 2020 (10:54 IST)
ಬೆಂಗಳೂರು : ಉಪಚುನಾವಣೆ ಗೆಲ್ಲಲು ಜೆಡಿಎಸ್ ರಣತಂತ್ರ ರೂಪಿಸಿದ್ದು, ಅದಕ್ಕಾಗಿ ಇಂದು  ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಸಭೆ ಕರೆದಿದ್ದಾರೆ.

ಇಂದು ಸಂಜೆ 5 ಗಂಟೆಗೆ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಸಭೆ ಕರೆಯಲಾಗಿದ್ದು,  ಉಪಚುನಾವಣೆ ಗೆಲ್ಲಲು ಜೆಡಿಎಸ್ ಕಾರ್ಯತಂತ್ರ ರೂಪಿಸಲಿದೆ. ಹಾಗೇ ಪರಿಷತ್ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಅಲ್ಲದೇ ಕೆಲ ಶಾಸಕರಿಗೆ ಜವಾಬ್ದಾರಿ ವಹಿಸುವ ಸಾಧ್ಯತೆ ಇದ್ದು,  ಸಭೆಯಲ್ಲಿ ಎಚ್.ಡಿ.ದೇವೇಗೌಡರು ಸಹ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ