ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ಸೋಮವಾರ, 21 ಅಕ್ಟೋಬರ್ 2019 (08:57 IST)
ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯದ 2 ಮಹಾನಗರ ಪಾಲಿಕೆ, 6 ನಗರ ಸಭೆ, 3 ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.




ಮಂಗಳೂರು ಮಹಾನಗರ ಪಾಲಿಕೆ, ಶಿವಮೊಗ್ಗ ಜಿಲ್ಲೆಯ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿ, ಬಳ್ಳಾರಿ ಕಂಪ್ಲಿ ಪುರಸಭೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ನ.12ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಒಂದು ವೇಳೆ ಮರುಮತದಾನವಿದ್ದರೆ  ನ.13ರಂದು ಬೆಳಿಗ್ಗೆ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಬಳಿಕ ನ.14ರಂದು ಮತ ಏಣಿಕೆಯ ಕಾರ್ಯ ನಡೆಯಲಿದ್ದು ಫಲಿತಾಂಶ ಹೊರಬೀಳಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.


ಹಾಗೇ ಚುನಾವಣೆಯ ಹಿನ್ನಲೆ  ರಾಜ್ಯ ಚುನಾವಣಾ ಆಯೋಗ ಈಗಾಗಲೇ  ನೀತಿ ಸಂಹಿತೆ ಜಾರಿಗೊಳಿಸಿದೆ. ಅಲ್ಲದೇ ಇದೇ ಅ.31ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ನ.4ರೊಳಗೆ ನಾಮಪತ್ರ ಹಿಂಪಡೆಯುವ ಅವಕಾಶ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ