ಲಾಕ್ ಡೌನ್ ಹಿನ್ನಲೆ; ಮದ್ಯ ಸಿಗದೆ ಕುಡುಕ ಆತ್ಮಹತ್ಯೆ

ಗುರುವಾರ, 2 ಏಪ್ರಿಲ್ 2020 (10:03 IST)
ಚಿಕ್ಕೋಡಿ : ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಸಿಗದೆ ಕುಡುಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಬಡಿಗೇರಿ(44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದ್ದು, ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಬೇರಸಗೊಂಡ ಈತ ಮದ್ಯಕ್ಕಾಗಿ ಬೀದಿ ಬೀದಿ ಸುತ್ತುತ್ತಿದ್ದ ಈತ ಸೋಮವಾರದಂದು ನಾಪತ್ತೆಯಾಗಿದ್ದ.

 

ಆದರೆ ಬುಧವಾರದಂದು ಆತ ಶವವಾಗಿ ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ