ದುಃಖದಲ್ಲಿ ಸರ್ಕಾರದ ವಿರುದ್ಧ ಮಾತನಾಡಿದ್ದೇನೆ, ಕ್ಷಮಿಸಿ ಎಂದ ನಿರಂಜನ್ ಹಿರೇಮಠ್

Sampriya

ಮಂಗಳವಾರ, 23 ಏಪ್ರಿಲ್ 2024 (19:29 IST)
Photo Courtesy X
ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ತನ್ನ ಸ್ನೇಹಿತನಿಂದ ಹತ್ಯೆಯಾದ ನೇಹಾ ತಂದೆ ನಿರಂಜನ್ ಜತೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ತನ್ನ ಹೇಳಿಕೆ ಸಂಬಂಧ ಕ್ಷಮೆ ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಿರಂಜನ್ ಅವರು,  ಪ್ರಕರಣದಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿದೆ. ಮಗಳನ್ನು ಕಳೆದುಕೊಂಡ ದುಃಖದಲ್ಲಿ ಸರ್ಕಾರದ ವಿರುದ್ಧ ಮಾತನಾಡಿರುವುದಕ್ಕೆ ವಿಷಾದವಿದೆ ಎಂದು. ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇವೆ ಎಂದು ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.  

ಮಗಳನ್ನು ಕಳೆದುಕೊಂಡ ದುಃಖದಲ್ಲಿ, ಭಾವಾವೇಶದಲ್ಲಿ ಸರ್ಕಾರದ ವಿರುದ್ಧ ಮಾತನಾಡಿದ್ದರ ವಿಷಾದವಿದೆ ಎಂದಿರುವ ನೇಹಾ ತಂದೆ ನಿರಂಜನ್ ಹಿರೇಮಠ ಅವರು ಸರ್ಕಾರದ ಕಾನೂನು ಕ್ರಮಗಳ ಬಗ್ಗೆ ಅರಿವಿಲ್ಲದೆ ಮಾತನಾಡಿದ್ದೇನೆ ಎಂದು ಕ್ಷಮೆ ಕೇಳಿದ್ದಾರೆ.

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಆರೋಪಿಗೆ ಗರಿಷ್ಠ ಮಟ್ಟದ ಶಿಕ್ಷೆ ಕೊಡಿಸಲು ಬೇಕಾದ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಂಡಿದೆ.

ಮಗಳನ್ನು ಕಳೆದುಕೊಂಡ ದುಃಖದಲ್ಲಿ, ಭಾವಾವೇಶದಲ್ಲಿ ಸರ್ಕಾರದ ವಿರುದ್ಧ ಮಾತನಾಡಿದ್ದರ ವಿಷಾದವಿದೆ ಎಂದಿರುವ ನೇಹಾ ತಂದೆ ನಿರಂಜನ್ ಹಿರೇಮಠ ಅವರು ಸರ್ಕಾರದ ಕಾನೂನು ಕ್ರಮಗಳ ಬಗ್ಗೆ ಅರಿವಿಲ್ಲದೆ ಮಾತನಾಡಿದ್ದೇನೆ ಎಂದು ಕ್ಷಮೆ ಕೇಳಿದ್ದಾರೆ.

ಆರೋಪಿಗೆ ಅತೀ ಕಠಿಣ ಶಿಕ್ಷೆ ಕೊಡಿಸಿ ನೇಹಾ ಆತ್ಮಕ್ಕೆ ಶಾಂತಿ ದೊರಕಿಸಿಕೊಡುವುದಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ