ಸಿನಿಮಾ ಸ್ಟೈಲ್ ನಲ್ಲಿ ರೌಡಿ ಶೀಟರ್ ಮೇಲೆ ಹಲ್ಲೆ – ಬೆಚ್ಚಿ ಬಿದ್ದ ಜನತೆ

ಶುಕ್ರವಾರ, 28 ಫೆಬ್ರವರಿ 2020 (13:06 IST)
ಸಿನಿಮಾ ಸ್ಟೈಲ್ ನಲ್ಲಿ ಬಂದ ದುಷ್ಕರ್ಮಿಗಳು ರೌಡಿ ಶೀಟರ್ ವೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಕಾರ್ ನಲ್ಲಿ ಬಂದ ನಾಲ್ಕು ಜನ ಅಪರಿಚಿತ ವ್ಯಕ್ತಿಗಳು ಲಾಂಗ್ -ಮಚ್ಚಿನಿಂದ ರೌಡಿಶೀಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಮಂಡ್ಯದ ಸಂತೇಬಾಚಹಳ್ಳಿ  ಹನುಮನಹಳ್ಳಿಯ ಸೀಮೆಎಣ್ಣೆ ಕುಮಾರ್  ಎಂಬಾತನ  ಮೇಲೆ ನಾಲ್ಕು ಜನ ಅಪರಿಚಿತ ವ್ಯಕ್ತಿಗಳಿಂದ  ಮಚ್ಚಿನಿಂದ ಹಲ್ಲೆ ನಡೆದಿದ್ದು, ಕುತ್ತಿಗೆ ಮತ್ತು ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಹಳೆಯ ದ್ವೇಷದ ಹಿನ್ನೆಲೆ ಹಲ್ಲೆ ನಡೆದಿರೊ ಶಂಕೆ ವ್ಯಕ್ತವಾಗಿದೆ.

ಗಾಯಾಳು ಕುಮಾರ್ ನನ್ನು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ