ಗಂಟಲು ದ್ರವ ಸಂಗ್ರಹಣೆಗೆ ಸಹಕಾರ ನೀಡದಿದ್ದರೆ ಕಠಿಣ ಕ್ರಮ

ಮಂಗಳವಾರ, 2 ಜೂನ್ 2020 (20:46 IST)
ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಬಂದು ಸಾಂಸ್ಥಿಕ ಕ್ವಾರಂಟೈನ್ ಪೂರೈಸಿ ಮನೆಗೆ ತೆರಳಿರುವ ವಲಸಿಗರಿಗೆ ಕೋವಿಡ್-19 ಪರೀಕ್ಷೆ ಮಾಡಬೇಕಾಗಿದೆ.

ಹೀಗಾಗಿ ಗಂಟಲು ದ್ರವ ಸಂಗ್ರಹಣೆಗೆ ಬರುವ ಆರೋಗ್ಯ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಮನವಿ ಮಾಡಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಸಂದರ್ಭದಲ್ಲಿ ಕೊರೋನಾ ರೋಗದ ಲಕ್ಷಣ ಇದ್ದವರಿಗೆ ಮಾತ್ರ ಗಂಟಲು ದ್ರವ ಪಡೆದು ಪರೀಕ್ಷೆ ಮಾಡಲಾಗಿದೆ. ಇದೀಗ ವಲಸೆ ಬಂದು ಸಾಂಸ್ಥಿಕ ಕ್ವಾರಂಟೈನ್‍ನಿಂದ ಮನೆಗೆ ತೆರಳಿದವರೆಲ್ಲರಿಗೂ ನೋವೆಲ್ ಕೊರೋನಾ ವೈರಸ್ ಪರೀಕ್ಷೆ ಮಾಡಬೇಕಾದ ಅವಶ್ಯಕತೆ ಇರುತ್ತದೆ. ಹೀಗಾಗಿ ಮನೆಗೆ ಬರುವ ಆರೋಗ್ಯ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕು ಎಂದಿದ್ದಾರೆ.

ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಯಾರಾದರೂ ಅಡ್ಡಿಪಡಿಸಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ