ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಟೈಟ್ ಸೆಕ್ಯುರಿಟಿ

ಭಾನುವಾರ, 2 ಫೆಬ್ರವರಿ 2020 (21:24 IST)
ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.


ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಯಾಗಿ ನಿರ್ವಹಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ರೂಪಿಸಲಾಗಿದೆ.

4,000 ಪೊಲೀಸರು, 3+1 ಪೊಲೀಸ್ ವರಿಷ್ಠಾಧಿಕಾರಿಗಳು, 15 ಎಸಿಪಿ, 25 ಸರ್ಕಲ್ ಇನ್ಸ್‍ಪೆಕ್ಟರ್, 200 ಸಬ್‍ಇನ್‍ಪೆಕ್ಟರ್, 10 ಕೆ.ಎಸ್.ಆರ್.ಪಿ. ತುಕ್ಕಡಿ, 500 ಹೋಂ ಗಾರ್ಡ್, 700 ಟ್ರಾಫಿಕ್ ಪೊಲೀಸ್ ಹಾಗೂ 500 ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದೆ.

ಸಾಹಿತ್ಯ ಸಮ್ಮೇಳನ ನಡೆಯುವ ಎಲ್ಲ ವೇದಿಕೆ, ಸ್ಥಳಗಳಲ್ಲಿ ಸಿ.ಸಿ. ಟಿ.ವಿ. ಅಳವಡಿಸಲಾಗಿದೆ. ಹೀಗಂತ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ