ವಿಶ್ವವಿದ್ಯಾಲಯಕ್ಕೆ ಇಲ್ಲ ಖಾಯಂ ಕುಲಪತಿ ; ಉನ್ನತ ಶಿಕ್ಷಣ ಸಚಿವ ಹೇಳ್ತಿರೋದೇನು?

ಸೋಮವಾರ, 24 ಫೆಬ್ರವರಿ 2020 (17:18 IST)
ಆ ವಿಶ್ವವಿದ್ಯಾಲಯದಲ್ಲಿ ಖಾಯಂ ಕುಲಪತಿ ಹುದ್ದೆ ಖಾಲಿ ಇದ್ದು ತಿಂಗಳುಗಳೇ ಕಳೆಯುತ್ತಿವೆ.

ಕಲಬುರಗಿಯಲ್ಲಿರುವ ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಒಂದು ತಿಂಗಳ ಒಳಗಾಗಿ ಖಾಯಂ ಕುಲಪತಿಗಳ ನೇಮಕ ಮಾಡಲಾಗುವುದು. ಹೀಗಂತ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ನಂತರ ಮಂಥನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.

ವಿಶ್ವವಿದ್ಯಾಲಯದಲ್ಲಿ 183 ಬೋಧಕ ಮತ್ತು 350 ಬೋಧಕೇತರ ಹುದ್ದೆಗಳು ಖಾಲಿ ಇವೆ. ಇದರಲ್ಲಿ 80 ಬೋಧಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.

ಕಲಬುರಗಿ ಜಿಲ್ಲೆಯ ಚಿತ್ತಾಪುರ, ಜೇವರ್ಗಿ, ಚಿಂಚೋಳಿ, ಅಫಜಲಪುರ, ಸೇಡಂ ಮತ್ತು ಕಲಬುರಗಿಯ ಸರಕಾರಿ ಕಾಲೇಜುಗಳ ಗ್ರಂಥಾಲಯ ಹಾಗೂ ಇತರ ಸೌಲಭ್ಯಗಳಿಗಾಗಿ 6.5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಸುಧಾರಣೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಇ-ಆಡಳಿತ ವ್ಯವಸ್ಥೆ ಜಾರಿಗೆ ತರುತ್ತಿರುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ