ಕೊರೊನಾಗೂ ಕುರಿಗೂ ಸಂಬಂಧ?: ಸಿದ್ದರಾಮಯ್ಯ ಹೇಳಿದ್ದೇನು?

ಸೋಮವಾರ, 30 ಮಾರ್ಚ್ 2020 (17:08 IST)
ಜಾಗತಿಕವಾಗಿ ಕೊರೊನಾ ವೈಸರ್ ದಾಳಿಯಿಟ್ಟಿದ್ದು ಜನರ ಬಲಿ ಪಡೆಯುತ್ತಲೇ ಇದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.

ಇಂಥದ್ರಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ, ಮಾಜಿ ಸಿಎಂ ಸಿದ್ದರಾಮಯ್ಯ, ಕುರಿಗಳನ್ನು ಮೇಯಿಸಲು ಅವಕಾಶ ನೀಡಬೇಕು. ಹೀಗಂತ ಬಲವಾಗಿ ಆಗ್ರಹ ಮಾಡಿದ್ದಾರೆ.

ಟ್ವಿಟ್ ರ್ ನಲ್ಲಿ ಹೇಳಿಕೊಂಡಿರುವ ಸಿದ್ದರಾಮಯ್ಯ, ಕೊರೊನಾ ವೈರಸ್ ಬಗ್ಗೆ ತಪ್ಪು ಕಲ್ಪನೆಯಿಂದ ಕುರಿಗಳನ್ನು ಹೊಡೆಯುತ್ತಿದ್ದಾರೆ. ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಕುರಿಗಳಿಗೆ ಹಾಗೂ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯ ಮಾಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ