ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಸಚಿವ ಡಾ.ಹರ್ಷವರ್ಧನ್ ನೇಮಕ

ಶನಿವಾರ, 23 ಮೇ 2020 (08:34 IST)
Normal 0 false false false EN-US X-NONE X-NONE

ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅಧಿಕಾರ ವಹಿಸಿಕೊಂಡಿದ್ದಾರೆ.

 

ಹಿಂದೆ ಜಪಾನ್ ಡಾ.ಹಿರೊಕಿ ನಕಟನಿ ಅವರು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳು ಮಂಗಳವಾರ ಸಭೆ ನಡೆಸಿ ಸಹಿ ಹಾಕಿದ್ದವು .

 

ಆದಕಾರಣ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ನೇಮಕಗೊಂಡಿದ್ದು, ಕಾರ್ಯಕಾರಿ ಮಂಡಳಿಯು 34 ಮಂದಿ ಸದಸ್ಯರನ್ನು ಹೊಂದಿದೆ. ಇದು ಪೂರ್ಣ ಪ್ರಮಾಣದ ಹುದ್ದೆಯಲ್ಲ, ಆದರೆ ಅಧ್ಯಕ್ಷರಾದವರು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಭಾಗವಹಿಸಬೇಕಾಗುತ್ತದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ