ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ: ಮತ್ತೆ ವಿವಾದ ಸೃಷ್ಟಿಸಿದ ಸ್ಯಾಮ್ ಪಿತ್ರೋಡಾ

Krishnaveni K

ಬುಧವಾರ, 8 ಮೇ 2024 (14:02 IST)
ನವದೆಹಲಿ: ಕಾಂಗ್ರೆಸ್ ಸಾಗರೋತ್ತರ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಈ ಬಾರಿ ಅವರು ಉತ್ತರ ಮತ್ತು ದಕ್ಷಿಣ ಭಾರತೀಯರ ಲುಕ್ ಬಗ್ಗೆ ಕಾಮೆಂಟ್ ಮಾಡಿ ಟೀಕೆಗೊಳಗಾಗಿದ್ದಾರೆ.

ಕೆಲವು ದಿನದ ಮೊದಲು ಸ್ಯಾಮ್ ಪಿತ್ರೋಡಾ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಬಹುದು. ಅದರಂತೆ ಶೇ.55 ರಷ್ಟು ಪಾಲು ಸರ್ಕಾರಕ್ಕೆ ಮತ್ತು ಶೇ.45 ರಷ್ಟು ಪಾಲು ಆಸ್ತಿ ಮಕ್ಕಳಿಗೆ ಸಲ್ಲಿಕೆಯಾಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂತಹದ್ದೊಂದು ಕಾನೂನಿನ ಅಗತ್ಯವಿದೆ ಎಂದು ವಿವಾದ ಸೃಷ್ಟಿಸಿದ್ದರು.

ಇದೀಗ ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ತೋರುತ್ತಾರೆ ಮತ್ತು ಉತ್ತರ ಭಾರತೀಯರಿಗೆ ಚೀನಿಯರ ಹೋಲಿಕೆಯಿದೆ ಎಂದು ನಾಲಿಗೆ ಹರಿಯಬಿಟ್ಟಿದ್ದಾರೆ. ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಇಂತಹದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ, ಉತ್ತರದ ಜನರು ಬಿಳಿಯರಂತೆ ಮತ್ತು ದಕ್ಷಿಣದವರು ಆಫ್ರಿಕನ್ನರಂತೆ ಕಾಣುತ್ತಾರೆ. ನಾವೆಲ್ಲರೂ ಸಹೋದರ ಸಹೋರಿಯರು, ಎಲ್ಲಾ ಭಾಷೆಗಳನ್ನೂ ಗೌರವಿಸುತ್ತೇವೆ. ಭಾರತ ಅತ್ಯಂತ ವೈವಿದ್ಯಮಯ ದೇಶ’ ಎಂದು ಸ್ಯಾಮ್ ಪಿತ್ರೋಡಾ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ