ಅಮೇರಿಕಾದಲ್ಲಿ ಭೀಕರ ಅಪಘಾತ: ಗುಜರಾತ್‌ನ ಮೂವರು ಮಹಿಳೆಯರು ದುರ್ಮರಣ

Sampriya

ಶನಿವಾರ, 27 ಏಪ್ರಿಲ್ 2024 (16:30 IST)
ನವದೆಹಲಿ:  ಅಮೇರಿಕಾದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಮೃತ ದುರ್ದೈವಿಗಳು.   

ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯ ಸೇತುವೆಯಿಂದ 20 ಅಡಿ ಜಿಗಿದ ಕಾರು ಕೆಳಗೆ ಬಿದ್ದಿದೆ. ಅದರಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿ ಕಾರು ಚಲಾಯಿಸಿದರ ಪರಿಣಾಮ ಕಾರು ಸೇತುವೆಯಿಂದ ಕೆಳಗೆ ಬಿದ್ದು ಮರದಲ್ಲಿ ಸಿಕ್ಕಿಕೊಂಡಿದೆ. ಇನ್ನೂ ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನೂ  ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ