ಭಾರತೀಯ ಸೇನೆಗೆ 89 ವಿದೇಶಿ ಆ್ಯಪ್ ಗಳನ್ನು ಡಿಲೀಟ್ ಮಾಡುವಂತೆ ಕೇಂದ್ರದಿಂದ ಸೂಚನೆ

ಶುಕ್ರವಾರ, 10 ಜುಲೈ 2020 (08:44 IST)
ನವದೆಹಲಿ : ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ ಬೆನ್ನಲೇ ಇದೀಗ ಭಾರತೀಯ ಸೇನೆಗೆ 89 ವಿದೇಶಿ ಆ್ಯಪ್ ಗಳನ್ನು ಡಿಲೀಟ್ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಮಾಹಿತಿ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಫೇಸ್ ಬುಕ್, ಇನ್ ಸ್ಟಾಗ್ರಾಂ ಸೇರಿದಂತೆ ಒಟ್ಟು 89 ವಿದೇಶಿ ಆ್ಯಪ್ ಗಳನ್ನು ಡಿಲೀಟ್ ಮಾಡುವಂತೆ ಸೂಚಿಸಲಾಗಿದೆ. ಒಟ್ಟು 15 ಲಕ್ಷ ಭಾರತೀಯ ಸೇನೆಯ ಸಿಬ್ಬಂದಿಗೆ ಜುಲೈ 15ರೊಳಗೆ ಈ ಆ್ಯಪ್ ಗಳನ್ನು ಡಿಲೀಟ್ ಮಾಡುವಂತೆ ಆದೇಶಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ