ಮಧ್ಯರಾತ್ರಿ ಇದೇನಿದು ಇಂತಹ ಘಟನೆ? ತೀರ್ವ ಭೂಕಂಪಕ್ಕೆ 300 ಬಲಿ!

ಶನಿವಾರ, 9 ಸೆಪ್ಟಂಬರ್ 2023 (07:56 IST)
ರಬತ್ : ಶುಕ್ರವಾರ ತಡರಾತ್ರಿ ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 300 ಜನ ಮೃತಪಟ್ಟ ವರದಿಯಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್ವರ್ಕ್ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾದ ಮರಕೇಶ್ನ ನೈಋತ್ಯದ 71 ಕಿಲೋಮೀಟರ್ ದೂರದ 18.5 ಕಿಮೀ ಆಳದಲ್ಲಿದೆ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.

ಭೂಕಂಪದ ತೀವ್ರತೆಗೆ ಪುರಾತನ ಕಟ್ಟಡಗಳು ಸೇರಿದಂತೆ ಅನೇಕ ಕಟ್ಟಡಗಳಿಗೆ ಹಾನಿಯಾಗಿದೆ. 
ಭೂಕಂಪದಿಂದಾಗಿ ನಗರದಲ್ಲಿ ವಿದ್ಯುತ್ ಹಾಗೂ ದೂರವಾಣಿ ಸಂಪರ್ಕ ಸ್ಥಗಿತಗೊಂಡಿದೆ. ಈಗ ತಾತ್ಕಾಲಿಕ ನೆಟ್ವರ್ಕ್ ವ್ಯವಸ್ಥೆ ಮಾಡಲಾಗಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ