ಸಂಕಷ್ಟಹರ ಚತುರ್ಥಿಯನ್ನು ಹೀಗೆ ಆಚರಿಸಿ ಕಷ್ಟವನ್ನು ದೂರವಾಗಿಸಿ
ಶುಕ್ರವಾರ, 7 ಸೆಪ್ಟಂಬರ್ 2018 (15:22 IST)
ಬೆಂಗಳೂರು : ಗಣೇಶನನ್ನು ವಿಘ್ನನಿವಾರಕನೆಂದು ಕರೆಯುತ್ತಾರೆ. ಇಂತಹ ವಿಘ್ನನಿವಾರಕನ ಆರಾಧನೆಗೆಗಾಗಿಯೇ ಪ್ರತಿ ತಿಂಗಳಲ್ಲಿ ಒಂದು ದಿನವನ್ನು ವಿಶೇಷವಾಗಿ ನಿಗದಿಪಡಿಸಲಾಗಿದ್ದು ಆ ದಿನಕ್ಕೆ ಸಂಕಷ್ಟ ಹರ ಚತುರ್ಥಿ ಎನ್ನುತ್ತಾರೆ. ಪ್ರತಿ ತಿಂಗಳ ಕೃಷ್ಣಪಕ್ಷದ 4 ನೆಯ ದಿನವನ್ನು(ಚತುರ್ಥಿ)ಯನ್ನು ಸಂಕಷ್ಟಹರ ಚತುರ್ಥಿ ಎಂದು ಆಚರಿಸಲಾಗುತ್ತದೆ.
ಸಂಕಷ್ಟ ಹರ ಚತುರ್ಥಿಯ ಮತ್ತೊಂದು ವಿಶೇಷವೇನೆಂದರೆ ಮಂಗಳವಾರದಂದು ಸಂಕಷ್ಟ ಚತುರ್ಥಿ ಬಂದರೆ ಆ ವ್ರತಕ್ಕೆ ಮತ್ತಷ್ಟು ಹೆಚ್ಚಿನ ಮಹತ್ವವಿದ್ದು, ಅದನ್ನು ಅಂಗಾರಕ (ಮಂಗಳ) ಚತುರ್ಥಿ ಎಂಬ ಹೆಸರಿನಲ್ಲಿ ಆಚರಣೆ ಮಾಡಲಾಗುತ್ತದೆ.
ಆಚರಣೆ ಹೇಗೆ?
ಅಂದು ಉಪವಾಸ ಮಾಡಬೇಕು. ಸಂಜೆಯ ಸಮಯದಲ್ಲಿ ಸ್ನಾನ ಮಾಡಿ ಗಣಪತಿಯ ಪೂಜೆ ಮಾಡಬೇಕು. ಪೂಜೆಯ ನಂತರ ರಾತ್ರಿ ಚಂದ್ರ ದರ್ಶನ ಮಾಡಿ ಅರ್ಘ್ಯವನ್ನು ಕೊಟ್ಟು, ಹೂವು, ಅಕ್ಷತೆಗಳನ್ನು ಸಲ್ಲಿಸಿ ನಮಸ್ಕರಿಸಬೇಕು. ಪೂಜೆ ಸಮಾಪ್ತಿಯಾದ ನಂತರ ಕೊನೆಗೆ ಗಣಪತಿಗೆ ನೈವೇದ್ಯವನ್ನು ಅರ್ಪಿಸಿ ಭೋಜನ ಮಾಡಬೇಕು. ಈ ರೀತಿ ಸಂಕಷ್ಟ ಚತುರ್ಥಿಯನ್ನು ಆಚರಿಸುವುದರಿಂದ ವಿಘ್ನಗಳು ದೂರವಾಗಿ, ಮನಸ್ಸಿನ ಇಚ್ಛೆಗಳು ಈಡೇರಿ, ಸಂವೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.