ಶ್ರೀ ಗುರುರಾಯರ ಸನ್ನಿಧಾನದಲ್ಲಿ ಮಂತ್ರಾಕ್ಷತೆ ಕೊಡುವುದು ಯಾಕೆ ಗೊತ್ತಾ?

ಶುಕ್ರವಾರ, 17 ಆಗಸ್ಟ್ 2018 (06:29 IST)
ಬೆಂಗಳೂರು : ಸಾಮಾನ್ಯವಾಗಿ ಯಾವುದೇ ದೇವಸ್ಥಾನಕ್ಕೆ ಹೋದರೂ ದೇವರ ಪ್ರಸಾದವೆಂದು ಕುಂಕುಮವನ್ನು ನೀಡುತ್ತಾರೆ. ಆದರೆ ಶ್ರೀ ಗುರುರಾಯರ ಸನ್ನಿಧಾನಕ್ಕೆ ಹೋದಾಗ ಮಂತ್ರಾಕ್ಷತೆ ಕೊಡುತ್ತಾರೆ. ಇದರ ಹಿಂದೆ ಒಂದು ಕತೆಯಿದೆ, ಪವಾಡವಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಅನೇಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಅವರಲ್ಲೊಬ್ಬ ಬಡ ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸ ಮುಗಿಸಿ ಹೊರಡುವಾಗ ರಾಯರಲ್ಲಿ ಬಂದು, ತನ್ನ ಬಡತನದ ಕಷ್ಟವನ್ನು ಅವರ ಬಳಿ ತೋಡಿಕೊಂಡು ತನ್ನನ್ನು ಅನುಗ್ರಹಿಸಬೇಕೆಂದು ಕೇಳಿಕೊಂಡನು. ಸ್ನಾನದ ಸಮಯದಲ್ಲಿದ್ದ ರಾಯರು ತಮ್ಮ ಬಳಿ ಕೊಡಲು ಏನೂ ಇಲ್ಲವೆಂದರು. ಆಗ ತಾವು ಏನು ಕೊಟ್ಟರು ನನಗೆ ಮಹಾ ಪ್ರಸಾದವೆಂದು ಒಂದು ಹಿಡಿ ಮಂತ್ರಾಕ್ಷತೆಯನ್ನಾದರೂ ತಮ್ಮ ಕೈಯಿಂದ ದಯಪಾಲಿಸಬೇಕೆಂದು ಭಕ್ತಿಯಿಂದ ಬೇಡಿದನು.

 

ಅದಕ್ಕವರು ಅವನಿಗೆ ಮಂತ್ರಾಕ್ಷತೆ ಕೊಟ್ಟರು. ಮಂತ್ರಾಕ್ಷತೆಯನ್ನೆ ವಿದ್ದ್ಯಾರ್ಥಿಯು ಮಹಾ ಪ್ರಸಾದ ವೆಂದು ಸ್ವೀಕರಿಸಿ ತನ್ನ ಊರಿನ ಕಡೆಗೆ ಹೊರಟನು. ದಾರಿಯಲ್ಲಿ ಕತ್ತಲಾಗಿದ್ದರಿಂದ ಒಂದು ಮನೆಯ ಜಗಲಿಯ ಮೇಲೆ ಮನೆಮಾಲಿಕರಲ್ಲಿ ಅಪ್ಪಣೆ ಪಡೆದು ಮಲಗಿದನು. ಆ ಸಮಯದಲ್ಲಿ ಮನೆಯ ಮಾಲಿಕನ ಹೆಂಡತಿ ಗರ್ಭಿಣಿಯಾಗಿದ್ದಳು. ಮಧ್ಯರಾತ್ರಿಯಲ್ಲಿ ಒಂದು ಪಿಶಾಚಿಯು ಆ ಮನೆಯೊಳಗೆ ಹೋಗಿ, ಹುಟ್ಟಲಿರುವ ಮಗುವನ್ನು ಕೊಲ್ಲಬೇಕೆಂದು ಅಲ್ಲಿಗೆ ಬಂದಿತು.

 

ಆದರೆ ಜಗಲಿಯಲ್ಲಿ ಮಲಗಿದ ಭಕ್ತನ ಬಳಿಯಿರುವ ಮಂತ್ರಾಕ್ಷತೆ ದಾಟಲು ಪ್ರಯತ್ನಿಸಿದಾಗ ಮಂತ್ರಾಕ್ಷತೆ ಬೆಂಕಿಯಂತೆ ಕಂಡು ಬಂದಿತು. ಇದರಿಂದ ಗಾಬರಿಗೊಂಡ ಪಿಶಾಚಿಯು ಭಕ್ತನನ್ನು ನೋಡಿ ಮಂತ್ರಾಕ್ಷತೆ ದೂರ ಎಸೆಯಲು ಹೇಳಿತು. ಪಿಶಾಚಿಯನ್ನು ನೋಡಿ ಹೆದರಿದ ಭಕ್ತನು ಮಂತ್ರಾಕ್ಷತೆಯನ್ನು ಅದರ ಮೇಲೆ ಎಸೆದನು. ಮಂತ್ರಾಕ್ಷತೆಯ ಪ್ರಭಾವದಿಂದ ಪಿಶಾಚಿಯು ಚೀರುತ್ತಾ ಅಲ್ಲೆ ಸುಟ್ಟು ಬೂದಿಯಾಯಿತು. ರಾಯರು ಕೊಟ್ಟ ಮಂತ್ರಾಕ್ಷತೆಯ ಶಕ್ತಿಯಿಂದ ದುಷ್ಟ ಶಕ್ತಿಯ ನಾಶವಾಯಿತು.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ