ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 14 ಆಗಸ್ಟ್ 2022 (11:16 IST)
ಇಂದಿನ ದಿನದ ದ್ವಾದಶ ರಾಶಿ ಫಲ ಹೇಗಿದೆ ನೋಡಿ.
 
ಮೇಷ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗಬಹುದು. ಸಂಗಾತಿಯ ಮಾತುಗಳು ಅಸಹನೆ ತಂದೀತು. ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾಗುವ ಸಂತೋಷವಿರಲಿದೆ. ತಾಳ್ಮೆಯಿರಲಿ.
 
ವೃಷಭ: ಆರೋಗ್ಯ ವಿಚಾರದಲ್ಲಿ ಉದಾಸೀನ ಪ್ರವೃತ್ತಿ ಸಲ್ಲದು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರ.
 
ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬಡ್ತಿಗಾಗಿ ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಲ್ಪಿಸಲಾಗಿದೆ.
 
ಕರ್ಕಟಕ: ವಿಶೇಷ ಅತಿಥಿಗಳ ಸ್ವಾಗತಕ್ಕೆ ಸಿದ್ಧರಾಗಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಪಡೆದಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಾಗಿದೆ.
 
ಸಿಂಹ: ವೃತ್ತಿರಂಗದಲ್ಲಿ ಉನ್ನತಾಧಿಕಾರದ ಲಾಭ ಪಡೆದುಕೊಳ್ಳಲಾಗಿದೆ. ರಾಜಕೀಯ ರಂಗದವರಿಗೆ ಕೀರ್ತಿ ಸಂಪಾದಿಸುವ ಯೋಗ. ಗುರು ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಅನಿವಾರ್ಯ ಕೆಲಸಗಳಿಗಾಗಿ ಪ್ರಯಾಣ.
 
ಕನ್ಯಾ: ನೂತನ ಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತೋಷ ಸಂಭ್ರಮ. ದಾಂಪತ್ಯದಲ್ಲಿ ಸುಖ ವೃದ್ಧಿಯಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಾಗಿದೆ. ಆಸ್ತಿ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.
 
ತುಲಾ: ನಿಮ್ಮ ಉದ್ದೇಶಿತ ಕಾರ್ಯ ನೆರವೇರಲು ಕುಟುಂಬ ಸದಸ್ಯರ ಸಹಕಾರವಿರಲಿದೆ. ಆಸ್ತಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ ಇದೆ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಕಿರು ಸಂಚಾರ ಮಾಡಿದೆ.
 
ವೃಶ್ಚಿಕ:ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದಾಂಪತ್ಯದಲ್ಲಿ ಮಧ್ಯಮ ಸುಖವಿರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಮುನ್ನಡೆಯಿದೆ. ಬಂಧು ಮಿತ್ರರ ಸಹಕಾರವಿದೆ. ದೇವತಾ ಪ್ರಾರ್ಥನೆ ಮಾಡಿ.
 
ಧನು: ನಿಮ್ಮ ಹಠವಾದಿ ಮನೋಭಾವದಿಂದ ಬೇರೆಯವರಿಗೆ ತೊಂದರೆಯಾಗುತ್ತದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಿದೆ.
 
ಮಕರ: ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಿತು. ಸರಕಾರೀ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಕಟ್ಟಡ ಕಾಮಗಾರಿಗಳು ಪ್ರಗತಿಯಲ್ಲಿದೆ. ಪ್ರೇಮಿಗಳಿಗೆ ಮನೆಯವರಿಗೆ ಒಪ್ಪಿಗೆ ಸಿಗಲಿದೆ.
 
ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಿದ್ದಾರೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ ಇದೆ.
 
ಮೀನ: ವೃತ್ತಿರಂಗದಲ್ಲಿ ಸನ್ಮಿತ್ರರ ಸಹಕಾರದಿಂದ ಏಳಿಗೆ ಇದೆ. ಹಣಕಾಸಿನ ಹರಿವಿಗೆ ತೊಂದರೆಯಿಲ್ಲ. ಆದರೆ ಅನಿರೀಕ್ಷಿತ ವೆಚ್ಚಗಳಿಗೆ ಸಿದ್ಧರಾಗ. ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ