ಈ ಸಮಯದಲ್ಲಿ ಸ್ನಾನ ಮಾಡಿದರೆ ಮನೆಯಲ್ಲಿ ದರಿದ್ರ ಆವರಿಸುತ್ತದೆಯಂತೆ

ಶುಕ್ರವಾರ, 2 ನವೆಂಬರ್ 2018 (13:59 IST)
ಬೆಂಗಳೂರು : ಪ್ರತಿಯೊಬ್ಬರು ದೇಹದ ಕೊಳೆ ತೊಳೆಯಲು ಸ್ನಾನ ಮಾಡುತ್ತಾರೆ. ಆದರೆ ಶಾಸ್ತ್ರದ ಪ್ರಕಾರ ಸ್ನಾನವನ್ನು ನಮಗೆ ಅನುಕೂಲವಾದ  ಸಮಯದಲ್ಲಿ ಮಾಡಬಾರದಂತೆ. ಅದಕೊಂದು  ನಿಯಮ ಕೂಡ ಇದೆಯಂತೆ. ನೀವು ಸ್ನಾನ ಮಾಡುವ ಸಮಯ ನಿಮ್ಮ ಸುಖ, ಸಂತೋಷ, ಆರ್ಥಿಕ ವ್ಯವಸ್ಥೆ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಧರ್ಮಶಾಸ್ತ್ರದಲ್ಲಿ ನಾಲ್ಕು ರೀತಿಯ ಸ್ನಾನವನ್ನು ಹೇಳಲಾಗಿದೆ.


*ಬೆಳಗಿನ ಜಾವ 4 ಗಂಟೆಯಿಂದ ಐದು ಗಂಟೆಯೊಳಗೆ ಮಾಡುವ ಸ್ನಾನವನ್ನು ಮುನಿ ಸ್ನಾನವೆಂದು ಕರೆಯಲಾಗುತ್ತದೆ. ಇದು ಸ್ನಾನ ಮಾಡಲು ಅತ್ಯುತ್ತಮವಾದ ಸಮಯ. ಮುನಿ ಸ್ನಾನ ಮಾಡುವುದರಿಂದ ಮನೆಯಲ್ಲಿ ಸುಖ-ಶಾಂತಿ, ಸಮೃದ್ಧಿ ನೆಲೆಸುತ್ತದೆಂದು ನಂಬಲಾಗಿದೆ.


*ಬೆಳಿಗ್ಗೆ ಐದು ಗಂಟೆಯಿಂದ ಆರು ಗಂಟೆಯೊಳಗೆ ಸ್ನಾನ ಮಾಡಿದ್ರೆ ಆಯಸ್ಸು, ಕೀರ್ತಿ, ಧನ, ಸಂತೋಷ ಲಭಿಸುತ್ತದೆ. ಇದನ್ನು ದೇವಿ ಸ್ನಾನವೆಂದು ಕರೆಯಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಈ ಸ್ನಾನ ಕೂಡ ಉತ್ತಮವಾದದ್ದು.


*ಮೂರನೇ ಸ್ನಾನವನ್ನು ಮನುಷ್ಯ ಸ್ನಾನವೆಂದು ಕರೆಯಲಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯೊಳಗೆ ಮಾಡುವ ಸ್ನಾನ ಇದಾಗಿದೆ. ಈ ಸಮಯದಲ್ಲಿ ಸ್ನಾನ ಮಾಡಿದ್ರೆ ಕೆಲಸದಲ್ಲಿ ಯಶಸ್ಸು ಸಿಗುತ್ತದೆ ಎಂದು ನಂಬಲಾಗಿದೆ.


*ಕೊನೆಯ ಸ್ನಾನ ರಾಕ್ಷಸಿ ಸ್ನಾನ. ಇದೀಗ ಸಾಮಾನ್ಯವಾಗಿದೆ. 8 ಗಂಟೆ ನಂತ್ರ ಮಾಡುವ ಸ್ನಾನ ಈ ಶ್ರೇಣಿಯಲ್ಲಿ ಬರುತ್ತದೆ. ಇದನ್ನು ಧರ್ಮ ನಿಷೇಧವೆಂದು ಪರಿಗಣಿಸಲಾಗಿದೆ. ಈ ಸ್ನಾನ ಮಾಡುವುದರಿಂದ ಮನೆಯಲ್ಲಿ ಬಡತನ, ಕಲಹ, ಅಶಾಂತಿ, ಅನಾರೋಗ್ಯ ಕಾಡುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ