ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಬಾರಿ ಮಾಡಿದರೆ ಏನು ಫಲ ಸಿಗುತ್ತದೆ ಗೊತ್ತಾ...?

ಸೋಮವಾರ, 8 ಜನವರಿ 2018 (08:11 IST)
ಬೆಂಗಳೂರು : ನಾವು ದೇವಸ್ಥಾನಕ್ಕೆ ಹೋದಾಗ ಪ್ರದಕ್ಷಿಣೆ ಹಾಕುತ್ತೇವೆ. ಆದರೆ ಈ ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರು ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಬಾರಿ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ.

 
ದೇವಸ್ಥಾನದಲ್ಲಿ 5 ಬಾರಿ ಪ್ರದಕ್ಷಿಣೆ ಮಾಡಿದರೆ ಜಯ ಸಿಗುತ್ತದೆ. 7ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಶತ್ರುಗಳನ್ನು ಪರಜಯ ಮಾಡಬಹುದು. 9 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಸಂತಾನಪ್ರಾಪ್ತಿಯಾಗುತ್ತದೆ. 11 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಆಯುಷ್ಯ ವೃದ್ದಿಯಾಗುತ್ತದೆ. ದೇವಸ್ಥಾನಕ್ಕೆ 13 ಬಾರಿ ಪ್ರದಕ್ಷಿಣೆ ಹಾಕಿದರೆ ಪ್ರಾರ್ಥನೆ ಸಿದ್ದಿಯಾಗುತ್ತದೆ. 15 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಹಾಗೆ 17 ಬಾರಿ ಪ್ರದಕ್ಷಿಣೆ ಮಾಡಿದರೆ ಧನ ವೃದ್ದಿಯಾಗುತ್ತದೆ. 19 ಬಾರಿ ಪ್ರದಕ್ಷಿಸಿದರೆ ರೋಗ ನಿವಾರಣೆಯಾಗುತ್ತದೆ.

 
ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ಹಾಗೆ ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ