ಮೇಷ: ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗುವುದು. ಆದರೆ ಆರೋಗ್ಯದ ಬಗ್ಗೆ ಹೆಚ್ಚನ ಕಾಳಜಿ ಅಗತ್ಯ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದಿನದಂತ್ಯಕ್ಕೆ ಶುಭ ವಾರ್ತೆಯಿದೆ.
ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಸಾಂಸಾರಿಕವಾಗಿ ನಿಮ್ಮ ಸಲಹೆಗಳಿಗೆ ಸಂಗಾತಿಯ ಸಹಮತ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಮುನ್ನಡೆ ಸಾಧಿಸುವಿರಿ. ಆರೋಗ್ಯದಲ್ಲಿ ಕಾಳಜಿ ಅಗತ್ಯ.
ಮಿಥುನ: ಮನೆ, ಆಸ್ತಿ ಖರೀದಿಗೆ ಇದು ಉತ್ತಮ ಸಮಯ. ಆರ್ಥಿಕವಾಗಿ ಸ್ಥಿತಿ ಗತಿ ಸುಧಾರಿಸಲಿದೆ. ಹಿರಿಯರೊಡನೆ ವಾದ ವಿವಾದ ಮಾಡಲು ಹೋಗಬೇಡಿ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಕೊಂಚ ಹಿನ್ನಡೆಯಾಗಬಹುದು. ಕಿರು ಸಂಚಾರ ಮಾಡಬೇಕಾಗುತ್ತದೆ.
ಕರ್ಕಟಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆಯಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ತಯಾರಿ ನಡೆಸುವಿರಿ. ಯೋಗ್ಯ ವಯಸ್ಕರಿಗೆ ಉತ್ತಮ ಸಂಬಂಧಗಳು ಕೂಡಿಬರಲಿವೆ. ಶೀತ ಸಂಬಂಧವಾದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಬಹುದು.
ಸಿಂಹ: ಅತಿಥಿಗಳ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚುವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆಯಿರಲಿದೆ. ಮಹಿಳಾ ಉದ್ಯೋಗಗಿಳಿಗೆ ಮುನ್ನಡೆ ಭಾಗ್ಯವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.
ಕನ್ಯಾ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆದರೆ ಸಂತಾನ ಹೀನ ದಂಪತಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಸ್ಥಿತಿ ಎದುರಾಗುವುದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಅನಿರೀಕ್ಷಿತ ಧನಾಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ತುಲಾ: ವೃತ್ತಿರಂಗದಲ್ಲಿ ಹೊಂದಾಣಿಕೆಯ ಅಗತ್ಯವಿದೆ. ಮಾನಸಿಕವಾಗಿ ಕಾಡುವ ಚಿಂತೆಗಳಿಂದ ಒಂದು ರೀತಿಯ ಆಲಸ್ಯತನ ಮೂಡಲಿದೆ. ನಿರುದ್ಯೋಗಗಿಳಿಗೆ ಉದ್ಯೋಗಾವಕಾಶಗಳು ಒದಗಿ ಬರಲಿವೆ. ಅವಿವಾಹಿತರು ಯೋಗ್ಯ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳ್ಳೆಯದು.
ವೃಶ್ಚಿಕ: ಹಿರಿಯರ ತೀರ್ಥಯಾತ್ರೆಗೆ ಏರ್ಪಾಟು ಮಾಡುವಿರಿ. ಉದ್ಯೋಗದಲ್ಲಿ ಬದಲಾವಣೆ ಬಯಸುತ್ತೀರಿ. ಮಹಿಳಾ ಉದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ವಹಿಸುವುದು ಉತ್ತಮ. ಸಂಗಾತಿಗಾಗಿ ಆಭರಣ ಖರೀದಿಗೆ ಮುಂದಾಗಬೇಕಾಗುತ್ತದೆ.
ಧನು: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹೆಚ್ಚಿನ ಧನವ್ಯಯ ಮಾಡಬೇಕಾಗುತ್ತದೆ. ನ್ಯಾಯಾಲಯದ ಕೆಲಸದಲ್ಲಿ ಜಯ ನಿಮ್ಮದಾಗಲಿದೆ. ಆದರೆ ಆದಾಯವಿದ್ದಷ್ಟೇ ಖರ್ಚೂ ಇರುವುದು. ವ್ಯಾಪಾರ ವಹಿವಾಟಿನಲ್ಲಿ ಮುನ್ನಡೆ ಸಾಧಿಸುವಿರಿ. ಸಂಚಾರದಲ್ಲಿ ಜಾಗ್ರತೆ ಅಗತ್ಯ.
ಮಕರ: ನಿಮ್ಮ ಆತ್ಮವಿಶ್ವಾಸದಿಂದ ಮುನ್ನಡೆದರೆ ಇಂದು ನೀವು ಅಂದುಕೊಳ್ಳುವ ಕೆಲಸಗಳು ನೆರವೇರಲಿವೆ. ಬಾಕಿ ಹಣ ಸಂದಾಯವಾಗುವುದು. ನಿಮ್ಮ ಬೆನ್ನ ಹಿಂದೆಯೇ ಹಿತ ಶತ್ರುಗಳಿರುತ್ತಾರೆ, ಎಚ್ಚರಿಕೆಯಿಂದಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.
ಕುಂಭ: ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದರೂ ನಿಮ್ಮ ಕಾರ್ಯಸಾಧನೆಯನ್ನು ಯಾರೂ ತಡೆಯಲಾಗದು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ತೋರಿಬರಲಿದೆ.
ಮೀನ: ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವರು. ಯೋಗ್ಯ ವಯಸ್ಕರಿಗೆ ವಿವಾಹ ಪ್ರಯತ್ನಕ್ಕೆ ನಾನಾ ಅಡಚಣೆಗಳು ಕಂಡುಬಂದೀತು. ನಿರುದ್ಯೋಗಿಗಳು ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ದೇವತಾ ಪ್ರಾರ್ಥನೆ ಮಾಡಿ.