ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 25 ಆಗಸ್ಟ್ 2019 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನೆಯಲ್ಲಿ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮ ಮನೆ ಮಾಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅವಿವಾಹಿತರಿಗೆ ಕೈಗೆ ಬಂದ ತುತ್ತು ಬಾಯಿಗಿಲ್ಲವಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

ಮಿಥುನ: ವೃತ್ತಿ ರಂಗದಲ್ಲಿ ನಿಮ್ಮ ವಿಶ್ವಾಸಕ್ಕೆ ದ್ರೋಹ ಎಸಗುವವರಿರುತ್ತಾರೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ಅಂದುಕೊಂಡ ಕೆಲಸಗಳನ್ನು ಯಶಸ್ವಿಯಾಗಿ ನೆರವೇರಿಸುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಿ ಬರುತ್ತದೆ.

ಕರ್ಕಟಕ: ವಾಹನ ಖರೀದಿ, ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ್ಯತೆಯಿದೆ. ಅಧಿಕಾರಿ ವರ್ಗದವರಿಗೆ ಕಾರ್ಯದೊತ್ತಡ ತಪ್ಪದು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಯಾಗಬಹುದು.

ಸಿಂಹ: ಅನಿರೀಕ್ಷಿತವಾಗಿ ಅತಿಥಿಗಳ ಆಗಮನಾಗವಲಿದೆ. ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಪ್ರೇಮಿಗಳ ಗುಟ್ಟು ರಟ್ಟಾಗಲಿವೆ. ದಾಯಾದಿಗಳೊಂದಿಗಿನ ಮನಸ್ತಾಪಗಳು ಪರಿಹಾರವಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ.

ಕನ್ಯಾ: ವಾಹನ ಚಾಲನೆ ಮಾಡುವವರಿಗೆ ಅಪಘಾತದ ಭೀತಿಯಿದ್ದು, ಎಚ್ಚರಿಕೆಯಿಂದಿರುವುದು ಮುಖ್ಯ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಮನಸ್ತಾಪಗಳಾಗಬಹುದು. ಸಂಚಾರದಲ್ಲಿ ಜಾಗ್ರತೆ ಅಗತ್ಯ. ಹಳೆಯ ಮಿತ್ರರ ಭೇಟಿಯಾಗುವಿರಿ.

ತುಲಾ: ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿಬರಲಿದೆ. ಸಾಮಾಜಿಕ ಕಾರ್ಯಗಳಿಗೆ ಕೈ ಜೋಡಿಸುವಿರಿ. ಧನಾಗಮನವಾಗಲಿದ್ದು, ಖರ್ಚು ವೆಚ್ಚದ ಬಗ್ಗೆ ಕಡಿವಾಣ ಅಗತ್ಯ. ದೇಹಾರೋಗ್ಯದಲ್ಲಿ ಏರು ಪೇರಾಗಬಹುದು. ಎಚ್ಚರಿಕೆ ಅಗತ್ಯ.

ವೃಶ್ಚಿಕ: ಪ್ರಯತ್ನಗಳಿಗೆ ತಕ್ಕ ಫಲ ಸಿಗದೇ ನಿರಾಶೆಯಾಗಬಹುದು. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಮಹಿಳೆಯರಿಂದ ಸಕಾಲದಲ್ಲಿ ನೆರವು ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಧನು: ಉದ್ದೇಶಿತ ಕಾರ್ಯ ಪೂರ್ತಿ ಮಾಡಲು ದೂರ ಸಂಚಾರ ಮಾಡುವಿರಿ. ಅಪರಿಚಿತರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರವಿರಲಿ. ಸಾಕಷ್ಟು ಧನವ್ಯಯವಾಗುವುದರಿಂದ ಚಿಂತೆಯಾಗುವುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು.

ಮಕರ: ಹೊಸ ಪ್ರಯತ್ನಗಳು ಕೈಗೂಡಲಿವೆ. ಮನೆ, ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸಾಂಸಾರಿಕವಾಗಿ ಕಿರಿ ಕಿರಿಗಳಿಂದ ಮಾನಸಿಕ ನೆಮ್ಮದಿಗೆ ಭಂಗವಾಗುವುದು. ಆರ್ಥಿಕವಾಗಿ ಯಾವುದೇ ಸಮಸ್ಯೆಗಳಿರದು. ಸಾಲಗಾರರಿಂದ ಮುಕ್ತಿ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮೀನ: ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸುವಿರಿ. ನೂತನ ದಂಪತಿಗಳಿಗೆ ಸಿಹಿ ಸುದ್ದಿಯೊಂದು ಕಾದಿದೆ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ವಹಿಸಿ. ಕಿರು ಸಂಚಾರ ಯೋಗವಿದೆ. ಇಷ್ಟಮಿತ್ರರ ಭೇಟಿ ಸಾಧ‍್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ