ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 27 ಸೆಪ್ಟಂಬರ್ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಗೆ ಕೊಂಚ ಸಮಾಧಾನಕರ ದಿನ. ಯಶಸ್ಸು ನಿಮ್ಮ ಬೆನ್ನ ಹಿಂದೆಯೇ ಇರುತ್ತದೆ. ಅನಗತ್ಯ ಚಿಂತನೆಗಳಿಗೆ ಕಡಿವಾಣ ಹಾಕಿ. ನಿರುದ್ಯೋಗಿಗಳಿಗೆ ಕೆಲಸದ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ವೃಷಭ: ಆರ್ಥಿಕವಾಗಿ ಹಣಕಾಸಿಗೆ ಯಾವುದೇ ತೊಂದರೆಯಾಗದು. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ತೋರಿಬಂದು ಸಂತಸವಾಗುವುದು. ಮಹಿಳೆಯರಿಗೆ ಉದ್ಯೋಗದಲ್ಲಿ ವರ್ಗಾವಣೆ ಸಾಧ‍್ಯತೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ವಿನಾಕಾರಣ  ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕರ್ಕಟಕ: ಆರ್ಥಿಕವಾಗಿ ಆದಾಯಕ್ಕಿಂತ ಹೆಚ್ಚು ಖರ್ಚು ವೆಚ್ಚಗಳಾಗುವುದರಿಂದ ಚಿಂತೆಯಾಗುವುದು. ಭೂಮಿ, ಮನೆ ಖರೀದಿಗೆ ಮುಂದಾಗುವಿರಿ. ಅವಿವಾಹಿತರಿಗೆ ವಿವಾಹ ಪ್ರಯತ್ನ ನಡೆಸಲು ಸಕಾಲ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಂಡುಬರುತ್ತದೆ. ಕಷ್ಟದಲ್ಲಿರುವ ಸ್ನೇಹಿತರಿಗೆ ಸಹಾಯಕ್ಕೆ ಮುಂದಾಗುವಿರಿ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ನ್ಯಾಯಾಲಯದ ಕೆಲಸಗಳಲ್ಲಿ ಮುನ್ನಡೆಯಿರುತ್ತದೆ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ವರ್ಗಾವಣೆ ಭೀತಿಯಿರಲಿದೆ. ಕೃಷಿಕರಿಗೆ ತಮ್ಮ ವ್ಯವಹಾರದಲ್ಲಿ ಲಾಭವಿರಲಿದೆ. ಅವಸರದ ನಿರ್ಧಾರ ಕೈಗೊಳ್ಳಬೇಡಿ. ಹಿರಿಯರ ಮಾತಿಗೆ ಕಿವಿಗೊಡಿ. ಕಲಹವಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಕೊಂಚ ಹಿನ್ನಡೆಯಾದೀತು.

ತುಲಾ: ಆರ್ಥಿಕವಾಗಿ ಧನಾಗಮನವಾಗಲಿದ್ದು, ಅಂದುಕೊಂಡ ಕಾರ್ಯಗಳು ನೆರವೇರಲಿವೆ. ಸರಕಾರಿ ಕೆಲಸದಲ್ಲಿರುವವರಿಗೆ ಮುಂಬಡ್ತಿ ಯೋಗವಿದೆ. ಆತ್ಮಸ್ಥೈರ್ಯವಿದ್ದರೆ ಎಂತಹ ಕಷ್ಟವಾದರೂ ನಿಭಾಯಿಸುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು.

ವೃಶ್ಚಿಕ: ನಿಮ್ಮ ದುಡುಕು ಮಾತಿನಿಂದ ಕೆಲಸ ಕೆಡಬಹುದು. ತಾಳ್ಮೆಯಿಂದ ವರ್ತಿಸುವುದು ಮುಖ್ಯ. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ಸಹೋದರ ವರ್ಗದವರ ಪ್ರೀತಿಗೆ ಪಾತ್ರರಾಗುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಧನು: ಕೆಲಸದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಅನಿರೀಕ್ಷಿತವಾಗಿ ಬಾಕಿ ಹಣ ಪಾವತಿಯಾಗಿ ಆರ್ಥಿಕವಾಗಿ ಸಬಲರಾಗುವಿರಿ. ಸಂಗಾತಿಯ ಮನೋಕಾಮನೆ ಪೂರೈಸುವಿರಿ. ಸಣ್ಣ ವ್ಯಾಪಾರಿಗಳಿಗೆ ಲಾಭವಾಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ  ಅನುಭವಕ್ಕೆ ಬರಲಿದೆ.

ಮಕರ: ಆದಾಯಕ್ಕೆ ಕೊರತೆಯಿರದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಿದೆ. ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಂಗಾತಿಯ ಮುನಿಸು ತಲೆನೋವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು.

ಕುಂಭ: ಕೆಟ್ಟ ಸ್ನೇಹಿತರ ಸಂಗದಿಂದ ಕೆಟ್ಟ ವ್ಯಸನಗಳಿಗೆ ಬಲಿಯಾಗಬೇಕಾದೀತು. ಉದ್ಯೋಗ ಕ್ಷೇತ್ರದಲ್ಲಿ ಮಾಡುವ ತಪ್ಪುಗಳಿಗೆ ಮೇಲಧಿಕಾರಿಗಳ ಬಳಿ ಬೈಸಿಕೊಳ್ಳಬೇಕಾಗುತ್ತದೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಆರ್ಥಿಕವಾಗಿ ನಾನಾ ರೀತಿಯ  ಅಡ್ಡಿ ಆತಂಕಗಳು ಇರುತ್ತವೆ. ಕೆಳ ಹಂತದ ನೌಕರರಿಗೆ ಅಭಿವೃದ್ಧಿ ಗೋಚರಕ್ಕೆ ಬರುವುದು. ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆ ಮಾಡಲು ಸಕಾಲ. ಚಾಡಿ ಮಾತುಗಳು ಕೇಳಿಬಂದೀತು. ತಾಳ್ಮೆಯಿಂದಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ