ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 2 ಅಕ್ಟೋಬರ್ 2019 (07:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ವೆಚ್ಚಗಳಾಗಲಿವೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ನಿರ್ಧಾರ ತೆಗೆದುಕೊಳ‍್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದಲೇ ಮೋಸವಾಗಬಹುದು, ಎಚ್ಚರಿಕೆಯಿಂದಿರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಸಾಧ್ಯತೆ.

ವೃಷಭ: ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ದಾಂಪತ್ಯದಲ್ಲಿ ಸಾಮರಸ್ಯವಿರುತ್ತದೆ. ಮನೆಯಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಮಿಥುನ: ವ್ಯಾಪಾರ, ವ್ಯವಾಹರದಲ್ಲಿ ಲಾಭ ಗಳಿಸಲಿದ್ದೀರಿ. ಆರ್ಥಿಕವಾಗಿ ಸ್ಥಿತಿ ಗತಿಗಳು ಸುಧಾರಿಸಲಿವೆ. ಹಾಗಿದ್ದರೂ ಮನಸ್ಸಿಗೆ ನೆಮ್ಮದಿ ಇರದು. ಋಣಾತ್ಮಕ ಚಿಂತೆಗಳಿಂದ ಆಲಸ್ಯತನ ಕಾಡಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಸಾಧ‍್ಯತೆಯಿದೆ.

ಕರ್ಕಟಕ: ಕುಟುಂಬ ಸದಸ್ಯರಲ್ಲಿ ಯಾರಾದರೊಬ್ಬರಿಗೆ ಆರೋಗ್ಯ ಸಮಸ್ಯೆಯಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಧನಲಾಭವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ವ್ಯವಹಾರದಲ್ಲಿ ಇದುವರೆಗೆ ಇದ್ದ  ಅಡೆತಡೆಗಳು ನಿವಾರಣೆಯಾಗಲಿವೆ. ಹಿತ ಶತ್ರುಗಳಿಂದ ತೊಂದರೆಯಾದೀತು, ಎಚ್ಚರಿಕೆಯಿಂದಿರಬೇಕು. ಸತತ ಓಡಾಟದಿಂದ ದೇಹಾಯಾಸವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

 
ಕನ್ಯಾ: ಮನೆಯ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ವ್ಯಾಪಾರ, ವ್ಯವಹಾರದಲ್ಲಿ ಪೈಪೋಟಿಯಿಂದ ಇಕ್ಕಟ್ಟಿಗೆ ಸಿಲುಕುವಿರಿ. ಹಾಗಿದ್ದರೂ ಬಂದ ಅವಕಾಶಗಳನ್ನು ಬಳಸಿಕೊಂಡರೆ ಲಾಭ ನಿಮ್ಮದಾಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಹಿತ ಶತ್ರುಗಳಿಂದ ದೂರವಿರುವುದೇ ಉತ್ತಮ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ನೂತನ ದಂಪತಿಗೆ ಸಂತಾನ ಫಲ ಸೂಚನೆ ಸಿಗುವುದು. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯುವಿರಿ. ಸರ್ಕಾರಿ ಕೆಲಸಗಳಲ್ಲಿ ಜಯ ಸಿಗುವುದು. ವಾಹನ ಖರೀದಿಗೆ ಸೂಕ್ತ ಸಮಯ.

ಧನು: ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯ ಪ್ರೀತಿ ಸಿಗಲಿದೆ. ಹಾಗಿದ್ದರೂ ದುಡುಕಿನ ವರ್ತನೆ ತೋರದಿರಿ. ಹೊಸ ಮಿತ್ರರ ಭೇಟಿ ಸಾಧ‍್ಯತೆ. ಆಸ್ತಿ ವಿವಾದಗಳಲ್ಲಿ ಜಯ ನಿಮ್ಮದಾಗಲಿದೆ. ದೇವರ ಪ್ರಾರ್ಥನೆ ಮಾಡಿ.

ಮಕರ: ನೀವು ಅಂದುಕೊಂಡ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆಯಲಿವೆ. ನಿಧಾನವಾಗಿ ಚೇತರಿಕೆ ಕಂಡುಬರಲಿದೆ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಬಹುದು. ಮನೆಗೆ ಹೊಸ  ಅತಿಥಿಗಳ ಆಗಮನವಾಗುವುದು. ಖರ್ಚಿನ ಬಗ್ಗೆ ಕಡಿವಾಣವಿರಲಿ.

ಕುಂಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ಸಣ್ಣ ವ್ಯಾಪಾರಿಗಳಿಗೆ ಲಾಭ ಸಿಗುವುದು. ಋಣಾತ್ಮಕ ಚಿಂತೆಗಳಿಗೆ ಕಡಿವಾಣ ಹಾಕಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಅನಿರೀಕ್ಷಿತ ಧನಾಗಮನ ಸಾಧ್ಯತೆಯಿದೆ.

ಮೀನ: ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಸಾಮರಸ್ಯದ ಕೊರತೆ ಕಂಡುಬರುವುದು. ಮನಸ್ತಾಪಗಳಿಗೆ ಎಡೆ ಮಾಡಿಕೊಡದಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ದೇವರ ದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ