ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 20 ಅಕ್ಟೋಬರ್ 2019 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರಿಗೆ ವಿವಾಹ ಪ್ರಯತ್ನಗಳು ಬರಲಿವೆ. ವೃತ್ತಿರಂಗದಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಿದ್ದೀರಿ. ಹಾಗಿದ್ದರೂ ಕಠಿಣ ಪರಿಶ್ರಮ ಅಗತ್ಯ. ಆರ್ಥಿಕ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ವೃಷಭ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಸಾಕಷ್ಟು ಧನಾಗಮನವಾಗಲಿದ್ದು, ಮುನ್ನಡೆ ಸಾಧಿಸುವಿರಿ. ಸಾಂಸಾರಿಕ ಸಂಬಂಧಗಳನ್ನು ಗಟ್ಟಿಗೊಳಿಸಲು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ವೈಯಕ್ತಿಕ ಬದುಕಿನಲ್ಲಿ ಹಲವು ತೊಂದರೆಗಳು ಎದುರಾಗಲಿವೆ. ಅಡೆತಡೆಗಳನ್ನು ದಾಟಿ ಮುನ್ನುಗ್ಗುವ ಧೈರ್ಯ ಬೆಳೆಸಿಕೊಳ್ಳಿ. ದೈಹಿಕ ಆರೋಗ್ಯ ಏರುಪೇರಾಗಬಹುದು, ಹೆಚ್ಚಿನ ಕಾಳಜಿ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕರ್ಕಟಕ: ಮನಸ್ಸಿಗೆ ಸಂತೋಷ ನೀಡುವಂತಹ ಕೆಲಸಗಳಲ್ಲಿ ಭಾಗಿಯಾಗುವಿರಿ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನ ವ್ಯಯ ಮಾಡಬೇಕಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಸಿಂಹ: ಭಾವನೆಗಳನ್ನು ಅದುಮಿಟ್ಟುಕೊಳ್ಳುವುದನ್ನು ಕಲಿಯಬೇಕು. ದುಡುಕಿನ ವರ್ತನೆ, ಮಾತಿನಿಂದ ಬೇರೆಯವರ ಮನ ನೋಯಿಸದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಕ್ಕಿ ಸಂತಸವಾಗುವುದು. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಯೋಚಿಸುವುದು ಒಳಿತು.

 
ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಜವಾಬ್ಧಾರಿಗಳು ಹೆಗಲಿಗೇರಲಿವೆ. ಇದರಿಂದ ಮಾನಸಿಕವಾಗಿ ಗೊಂದಲಕ್ಕೊಳಗಾಗುವಿರಿ. ದಾಂಒತ್ಯ ಜೀವನದಲ್ಲಿ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರ ವಹಿಸಿ. ತಾಳ್ಮೆಯಿಂದಿರುವುದು ಮುಖ್ಯ.

ತುಲಾ: ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಹಿರಿಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕವಾಗಿ ಧನಾಗಮನವಾಗಲಿದೆ.

ವೃಶ್ಚಿಕ: ಆರ್ಥಿಕವಾಗಿ ಸಾಕಷ್ಟು ಆದಾಯವಿದ್ದರೂ ಖರ್ಚು ವೆಚ್ಚಗಳೂ ಇರುತ್ತವೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವೃತ್ತಿರಂಗದಲ್ಲಿ ಚೇತರಿಕೆ ಕಂಡುಬರುವುದು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಸಂಗಾತಿಯ ಜತೆಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮಾನಸಿಕವಾಗಿ ಬೇಡದ ಯೋಚನೆಗಳಿಗೆ ಕಡಿವಾಣ ಹಾಕಿದರೆ ಒಳಿತು. ಧನಾಗಮನಕ್ಕೆ ಕೊರತೆಯಾಗದು. ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವುದು.

ಮಕರ: ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ಫಲ ಸಿಗುವುದು. ಕಾರ್ಯಸಾಧನೆಗಾಗಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದ್ದು, ಖರ್ಚು ವೆಚ್ಚದ ಬಗ್ಗೆಯೂ ಕಡಿವಾಣ ಅಗತ್ಯ.

ಕುಂಭ: ಸಾಂಸಾರಿಕವಾಗಿ ಹಲವು ಹೊಸ ಜವಾಬ್ಧಾರಿಗಳನ್ನು ಹೊತ್ತುಕೊಳ್ಳಬೇಕಾಗುತ್ತದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರುವುದು. ವಾಹನ ಸವಾರರು ಅಪಾಘತದ ಬಗ್ಗೆ ಎಚ್ಚರಿಕೆಯಿಂದಿರಬೇಕು.

ಮೀನ: ಗೃಹ ಸಂಬಂಧೀ ಕೆಲಸಗಳಲ್ಲಿ ಓಡಾಟ ನಡೆಸಬೇಕಾಗುತ್ತದೆ. ಶುಭ ಮಂಗಲ ಕಾರ್ಯ ನೆರವೇರಿಸಲು ಉತ್ತಮ ಸಮಯ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ