ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 21 ಅಕ್ಟೋಬರ್ 2019 (08:34 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯೊಂದಿಗಿನ ಮನಸ್ತಾಪಗಳಿಂದ ಮನಸ್ಸಿಗೆ ಬೇಸರವಾಗುವುದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಖರ್ಚು ವೆಚ್ಚಗಳು ಹೆಚ್ಚುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅಂದುಕೊಂಡ ಕೆಲಸಗಳಿಗೆ ಹಲವು ಅಡೆತಡೆಗಳು ಎದುರಾದರೂ ಧೈರ್ಯದಿಂದ ಮುನ್ನುಗ್ಗಿದ್ದರೆ ಯಶಸ್ಸು ಸಿಗುವುದು. ವಾಹನ ಖರೀದಿ ಯೋಗವಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿದೆ.

ಮಿಥುನ: ಅನಿವಾರ್ಯವಾಗಿ ವೃತ್ತಿಂರಗದಲ್ಲಿ ಹೊಸ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ವರ್ತಿಸುವಾಗ ಎಚ್ಚರವಹಿಸಿ. ಹಿರಿಯರ ತೀರ್ಥಯಾತ್ರೆಗೆ ಏರ್ಪಾಟು ಮಾಡುವಿರಿ. ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಕೆಲಸದೊತ್ತಡ ಹೆಚ್ಚುವುದು. ಸಹೋದ್ಯೋಗಿಗಳ ಅಸಹಕಾರ ಮನಸ್ಸಿಗೆ ಬೇಸರವುಂಟುಮಾಡಬಹುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರ್ಥಿಕವಾಗಿ ಆದಾಯ ವೃದ್ಧಿಯಾಗುವುದು. ಆದರೆ ಖರ್ಚಿನ ಬಗ್ಗೆ ಎಚ್ಚರವಿರಲಿ.

ಸಿಂಹ: ವಿದ್ಯಾರ್ಥಿಗಳಿಗೆ ನಿರೀಕ್ಷತ ಫಲ ಸಿಕ್ಕಿ ಮನಸ್ಸಿಗೆ ಸಂತಸವಾಗುವುದು. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮವಾಗಲಿದೆ. ಕಲಾ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸುವರು. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ.

 
ಕನ್ಯಾ: ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವಾಗ ವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ. ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಿ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಗೃಹೋಪಯೋಗಿ ವಸ್ತುಳಿಗೆ ಧನವ್ಯಯ ಮಾಡಬೇಕಾಗಬಹುದು.

ತುಲಾ: ಇಷ್ಟ ಮಿತ್ರರೊಂದಿಗೆ ಪ್ರವಾಸ,  ಭೋಜನ ಸಾಧ‍್ಯತೆಯಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ಸಾಧು ಸಂತರ ಭೇಟಿಯಾಗುವಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು.

ವೃಶ್ಚಿಕ: ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಾಡಬಹುದು. ವಿನಾಕಾರಣ ನಿಮ್ಮ ಸಂಸಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ.

ಧನು: ನಿಮ್ಮ ದುಡುಕು, ವರ್ತನೆ, ಮಾತು ಸಂಗಾತಿಯ ಕೋಪಕ್ಕೆ ಕಾರಣವಾಗಬಹುದು. ವಿನಾಕಾರಣ ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.

ಮಕರ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ಇಂದಿನ ದಿನ ಆರಂಭಿಸಿದರೆ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡುವಿರಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಆರ್ಥಿಕವಾಗಿ ಚೇತರಿಕೆ, ಅಭಿವೃದ್ಧಿ ನಿಧಾನವಾಗಿ ಗೋಚರಕ್ಕೆ ಬರುವುದು. ಹೊಸ ಯೋಜನೆಗಳು ಫಲಗೂಡಲಿವೆ. ಆದರೆ ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಸ್ವ ಉದ್ಯೋಗಿಗಳಿಗೆ ಲಾಭದಾಯಕ ದಿನವಾಗಲಿದೆ.
ಮೀನ: ಮಹಿಳಾ ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಆಸ್ತಿ, ಮನೆ ಖರೀದಿಗೆ ಮುಂದಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿ ಇರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ