ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 24 ಅಕ್ಟೋಬರ್ 2019 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಅಧಿಕ ಓಡಾಟ ನಡೆಸಬೇಕಾಗುತ್ತದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಆದಾಯಕ್ಕೆ ಕೊರತೆಯಿರದು.

ವೃಷಭ: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಫಲ ದೊರೆಯುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮಗೊಳ್ಳುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರುವುದು ಅಗತ್ಯ. ಅಂದುಕೊಂಡ ಕೆಲಸ ಕಾರ್ಯಗಳಿಗೆ ವಿಘ‍್ನಗಳು ಎದುರಾಗಬಹುದು. ತಾಳ್ಮೆ ಕಳೆದುಕೊಳ್ಳಬೇಡಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ತೊಂದರೆಗಳು ಎದುರಾದೀತು. ಆದರೆ ಸಹನೆಯಿಂದ ಎದುರಿಸುವಿರಿ. ಮಾತಿನಲ್ಲಿ ಸಂಯಮವಿದ್ದರೆ ನಿಮ್ಮನ್ನು ಯಾರೂ ಸೋಲಿಸಲಾಗದು. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು.

ಸಿಂಹ: ಸಣ್ಣ ಪುಟ್ಟ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೂ ನಿಮ್ಮ ಕ್ರಿಯಾಶೀಲತೆಯಿಂದ ಎಲ್ಲವನ್ನೂ ಮೆಟ್ಟಿ ನಿಲ್ಲಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದಿರುವುದು ಅಗತ್ಯ. ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

 
ಕನ್ಯಾ: ಸಾಂಸಾರಿಕವಾಗಿ ಕಿರಿ ಕಿರಿ ಇದ್ದರೂ ತಾಳ್ಮೆಯಿಂದ ನಡೆದುಕೊಳ್ಳುವುದು ಮುಖ್ಯ. ದುಡುಕಿ ಮಾತನಾಡಿ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ವಾಗ್ವಾದವಾಗಬಹುದು. ಎಚ್ಚರಿಕೆಯಿಂದಿರಿ. ಉದ್ಯೋಗದಲ್ಲಿ ಮುನ್ನಡೆಯಿರಲಿದೆ.

ತುಲಾ: ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಭಾಗ್ಯವಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೆಚ್ಚಿನ ಸಹಕಾರ ಸಿಗುವುದು. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.

ವೃಶ್ಚಿಕ: ನೀರಿಗಾಗಿ ನೆರೆಹೊರೆಯವರೊಂದಿಗೆ ವಾಗ್ವಾದವಾಗುವ ಸಾಧ‍್ಯತೆಯಿದೆ. ತಾಳ್ಮೆಯಿಂದಿರಿ. ಹೊಸ ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರುವುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗುವುದು.

ಧನು: ದೂರ ಪ್ರಯಾಣ ಸಂಭವವಿದೆ. ಎಚ್ಚರಿಕೆ ಅಗತ್ಯ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನದಿಂದ ಒಂದು ರೀತಿಯ ಸಂಭ್ರಮದ ವಾತಾವರಣವಿರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು.

ಮಕರ: ಹಂತ ಹಂತವಾಗಿ ನೀವು ಅಂದುಕೊಂಡಂತೆ ಅಭಿವೃದ್ಧಿ ಗೋಚರಕ್ಕೆ ಬರುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯಮಾಡುವಿರಿ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ.

ಕುಂಭ: ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯುವಿರಿ. ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಲ್ಯಾಣ ಯೋಗವಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.
ಮೀನ: ಮಾನಸಿಕವಾಗಿ ಸಂತಸವಿದ್ದರೂ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ