ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 25 ಅಕ್ಟೋಬರ್ 2019 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಲವು ಅಡೆತಡೆಗಳಿದ್ದರೂ ನಿಮ್ಮ ಕಾರ್ಯಸಾಧನೆಗೆ ತೊಂದರೆಯಾಗದು. ಮಿತ್ರರ ಸಹಕಾರ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಫಲ ಸಿಗುವುದು. ಆದರೆ ಕೌಟುಂಬಿಕವಾಗಿ ಪ್ರೀತಿ ಪಾತ್ರರ ಆಗಮನವಾಗಲಿದ್ದು, ತಾಳ್ಮೆಯಿಂದ ನಡೆದುಕೊಳ್ಳಬೇಕಾದ ಅಗತ್ಯವಿದೆ.

ವೃಷಭ: ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗುವುದು.

ಮಿಥುನ: ಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಮಾನಸಿಕ ಚಿಂತೆಗಳು ಕಾಡಬಹುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ.

ಸಿಂಹ: ಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕು. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

 
ಕನ್ಯಾ: ಹಿತ ಶತ್ರುಗಳ ಕಾಟದಿಂದ ಪಾಲಿಗೆ ಬಂದ ಅವಕಾಶಗಳು ಕೈ ತಪ್ಪಿ ಹೋಗುವುದು. ಆದರೆ ನಿರಾಸೆ ಬೇಡ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಆದರೆ ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ನೆಮ್ಮದಿ ನೀಡುವುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ದೂರ ಸಂಚಾರದಲ್ಲಿ ಅಪಘಾತಗಳಾಗದಂತೆ ಎಚ್ಚರಿಕೆ ವಹಿಸಬೇಕು. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸುವಿರಿ.

ವೃಶ್ಚಿಕ: ಅಂದುಕೊಂಡ ಯೋಜನೆಗಳನ್ನು ಪೂರ್ತಿ ಮಾಡಲು ಇದು ಸಕಾಲ. ವಾಹನ ಖರೀದಿ ಯೋಗವಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿದೆ.

ಧನು: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ನಾನಾ ತೊಡಕುಗಳು ಬರಬಹುದು. ತಾಳ್ಮೆಯಿಂದ ಎದುರಿಸಬೇಕು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ದೇವಾಲಯ ಸಂದರ್ಶಿಸುವಿರಿ.

ಮಕರ: ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಲೆಕ್ಕ ತಪ್ಪಿದರೆ ತೊಂದರೆ ತಪ್ಪಿದ್ದಲ್ಲ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲು ಓಡಾಟ ನಡೆಸಬೇಕಾಗುತ್ತದೆ.

ಕುಂಭ: ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ ಕಿರಿ ತಪ್ಪದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮೀನ: ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕಿಳಿಸಲು ಇದು ಸಕಾಲ. ಹಣಕಾಸಿನ ವಿಚಾರವಾಗಿ ಚಿಂತೆಗಳು ದೂರವಾಗುವುದು. ಬಾಕಿ ಹಣ ಸಂದಾಯವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ