ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 9 ನವೆಂಬರ್ 2019 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯ ಕೆಲವೊಂದು ನಿರ್ಧಾರಗಳು ನಿಮಗೆ ಇಷ್ಟವಾಗದೇ ಹೋಗಬಹುದು. ಆದರೆ ಕೋಪ ಮಾಡಿಕೊಳ್ಳುವುದರಿಂದ ಸಮಸ್ಯೆ ಪರಿಹಾರವಾಗದು. ಉದ್ಯೋಗ ಕ್ಷೇತ್ರದಲ್ಲಿ ನೀವಂದುಕೊಂಡಂತೆ ಕೆಲಸಗಳು ನೆರವೇರಲಿವೆ.

ವೃಷಭ: ಮಿತ್ರರ ಸಹಕಾರದಿಂದ ಕಷ್ಟದ ಸಂದರ್ಭವನ್ನೂ ಎದುರಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಅಡೆತಡೆಗಳು ಎದುರಾದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ  ನಿರುತ್ಸಾಹ ಕಂಡುಬರಬಹುದು. ಮನೆಯ ಹಿರಿಯ ಸದಸ್ಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಕೆಳ ಹಂತದ ನೌಕರರಿಗೆ ವರ್ಗಾವಣೆಯ ಭೀತಿಯಿರಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿಬರುವುದು.

ಕರ್ಕಟಕ: ಆರ್ಥಿಕವಾಗಿ ಚೇತರಿಕೆ ಕಂಡುಬಂದರೂ ಖರ್ಚಿನ ಬಗ್ಗೆ ಹಿಡಿತ ಅಗತ್ಯ. ಅಧಿಕಾರಿ ವರ್ಗದವರಿಗೆ ಮಹಿಳೆಯರಿಂದ ಅಪವಾದದ ಭೀತಿಯಿರಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

ಸಿಂಹ: ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಬಹುದು. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

 
ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ನಿಮಿತ್ತ ದೂರ ಪ್ರಯಾಣ ಮಾಡಬೇಕಾಗಿ ಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಸಾಂಸಾರಿಕವಾಗಿ ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಪ್ರಯಾಣದಲ್ಲಿ ಎಚ್ಚರಿಕೆಯಿಂದಿರಬೇಕು.

ತುಲಾ: ಅವಿವಾಹಿತ ಸ್ತ್ರೀಯರಿಗೆ ವಿವಾಹ ಪ್ರಯತ್ನದಲ್ಲಿ ಮುನ್ನಡೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು. ವಾಹನ ಖರೀದಿ ಯೋಗವಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ. ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಸಂಗಾತಿಯ ಸಹಕಾರ ಸಿಗುವುದು. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಧನು: ಆದಾಯಕ್ಕೂ ಹೆಚ್ಚು ಖರ್ಚು ಕಂಡುಬರುವುದು. ಕೌಟುಂಬಿಕವಾಗಿ ಅನಿರೀಕ್ಷಿತವಾಗಿ ಕೆಲವೊಂದು ಜವಾಬ್ಧಾರಿಗಳು ಹೆಗಲಿಗೇರಲಿವೆ. ಆರೋಗ್ಯದಲ್ಲಿ ಕೊಂಚ ಸುಧಾರಣೆಯಾಗಬಹುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆಯುಂಟಾಗಬಹುದು.

ಮಕರ: ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು. ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ಬೆನ್ನ ಹಿಂದೆ ನಡೆಯುತ್ತಿದ್ದ ಮೋಸ, ವಂಚನೆಗಳು ಬೆಳಕಿಗೆ ಬರಲಿವೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ನೂತನ ವಿವಾಹಿತರಿಗೆ ಮಧುಚಂದ್ರದ ಭಾಗ್ಯವಿದೆ. ಸಾಂಸಾರಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಿ ನೆಮ್ಮದಿ ಮೂಡುವುದು. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರುವುದು.

ಮೀನ: ನಿರಂತರ ಓಡಾಟದಿಂದ ದೇಹಾಯಾಸವಾಗಬಹುದು. ಧನಾಗಮನವಾಗುವುದರಿಂದ ಅಂದುಕೊಂಡ ವ್ಯವಹಾರಗಳನ್ನು ನೆರವೇರಿಸುವಿರಿ. ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು ನಿಮ್ಮದಾಗುವುದು. ದೇವತಾ ಪ್ರಾರ್ಥನೆ ಮರೆಯದಿರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ