ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 10 ಡಿಸೆಂಬರ್ 2019 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಿರದು. ಆದರೆ ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸಬೇಕಾಗುತ್ತದೆ.

ವೃಷಭ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆ. ನಿರುದ್ಯೋಗಿಗಳಿಗೆ ಉದ್ಯೋಗ ಬೇಟೆಗಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಿಥುನ: ಬೆನ್ನ ಹಿಂದೆ ಚೂರಿ ಹಾಕುವ ಹಿತಶತ್ರುಗಳ ಬಗ್ಗೆ ಎಚ್ಚರವಾಗಿರಬೇಕು. ನಿಮ್ಮ ವ್ಯವಹಾರಗಳಿಗೆ ಅಡೆತಡೆ ಉಂಟಾದೀತು. ಆದರೆ ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು. ಸಹೋದ್ಯೋಗಿಗಳ ಸಹಾಯಕ್ಕೆ ಧಾವಿಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಮಾಡುವಿರಿ. ಎಷ್ಟೋ ದಿನಗಳಿಂದ ಆಸೆಪಡುತ್ತಿದ್ದ ವಸ್ತು ಕೈ ಸೇರಲಿದೆ. ಚಿಂತೆ ಬೇಡ.

ಸಿಂಹ: ರಾಜಕೀಯ ರಂಗದಲ್ಲಿರುವವರ ಸ್ಥಾನ ಮಾನ ಇನ್ನಷ್ಟು ಭದ್ರವಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾಶೀಲತೆ ಬೆಳಕಿಗೆ ಬರಲಿದೆ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧರಾಗಬೇಕಾಗುತ್ತದೆ.

 
ಕನ್ಯಾ: ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಾಲ ಪಾವತಿ ಚಿಂತೆ ಕಾಡುವುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬರಬಹುದು. ಆದರೆ ಸ್ವ ವ್ಯವಹಾರ, ವ್ಯಾಪಾರ ಮಾಡುವವರಿಗೆ ಉನ್ನತಿಯ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ತುಲಾ: ಮನೆಯಲ್ಲಿ ಕಳ್ಳತನದ ಭೀತಿಯಿದೆ. ಹಿರಿಯರಿಂದ ಬಂದ ಬಳವಳಿಗಳನ್ನು ಕಾಪಾಡಿಕೊಳ್ಳುವ ಜವಾಬ್ಧಾರಿ ನಿಮ್ಮದಾಗಲಿದೆ. ಹೊಸ ಜನರ ಭೇಟಿಯಾಗುವಿರಿ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಅವಿವಾಹಿತರಿಗೆ ಇಷ್ಟು ದಿನ ಕೈತಪ್ಪುತ್ತಿದ್ದ ವಿವಾಹ ಸಂಬಂಧ ಕೈಗೂಡಲಿವೆ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಾಣಬಹುದು. ಕೃಷಿ ವ್ಯವಹಾರಗಳಲ್ಲಿ ಹಿನ್ನಡೆಯಾಗಬಹುದು. ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ.

ಧನು: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ನಾಲಿಗೆಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಅನಾರೋಗ್ಯ ತಪ್ಪಿದ್ದಲ್ಲ. ಗೃಹೋಪಯೋಗಿ ವಸ್ತುಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನ ಪಡಬೇಕು.

ಮಕರ: ಮನದೆನ್ನೆಯ ಸಂತುಷ್ಠಿಪಡಿಸಲು ಖರ್ಚು ವೆಚ್ಚ ಮಾಡಬೇಕಾಗುತ್ತದೆ. ವ್ಯವಹಾರದಲ್ಲಿ ಇಂದು ಹೂಡಿಕೆ ಮಾಡಲು ಸಕಾಲ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ವಾಹನ ಸವಾರರು ಎಚ್ಚರವಾಗಿರಬೇಕು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಎಚ್ಚರವಾಗಿರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ಸಿದ್ಧತೆಗಾಗಿ ಓಡಾಟ ನಡೆಸಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರಕಲಿದೆ. ಪ್ರೀತಿ ಪಾತ್ರರ ಮನಸ್ಸು ನೋಯಿಸುವ ಮಾತನಾಡಬೇಡಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ