ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಹಾಗಿದ್ದರೂ ಆರ್ಥಿಕವಾಗಿ ಬಾಕಿ ಬರಬೇಕಾದ ಹಣ ಪಾವತಿಯಾಗದೇ ಚಿಂತೆಯಾಗಬಹುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ವೃಷಭ: ನಿಮ್ಮ ಆಸೆ ಆಕಾಂಕ್ಷೆಗಳನ್ನು ಬದಿಗಿಟ್ಟು ಕುಟುಂಬಕ್ಕಾಗಿ ತ್ಯಾಗ ಮಾಡಬೇಕಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಹಣಕಾಸಿನ ವಿಚಾರದಲ್ಲಿ ಸಮಸ್ಯೆಗಳಿರದು. ವಾಹನ ಸಂಚಾರದಲ್ಲಿ ಜಾಗ್ರತೆ ವಹಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಿಥುನ: ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆಯಿರಬೇಕು, ಅಪಘಾತದ ಭಯವಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
ಕರ್ಕಟಕ: ಆರ್ಥಿಕವಾಗಿ ಆದಾಯ ಗಳಿಸಿ, ಸಾಲಗಳಿಂದ ಮುಕ್ತಿ ಕಾಣಬಹುದು. ವ್ಯವಹಾರದಲ್ಲಿ ಮುನ್ನಡೆ ಲಭಿಸಲಿದೆ. ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟವಿದ್ದರೂ ಅಂತಿಮ ಜಯ ನಿಮ್ಮದೇ. ಯೋಗ್ಯ ವಯಸ್ಕರಿಗೆ ವಿವಾಹ ಭಾಗ್ಯ ಕೂಡಿ ಬರಲಿದೆ.
ಸಿಂಹ: ದಾಯಾದಿಗಳ ಕೆಟ್ಟ ಮಾತಿನಿಂದ ಮನಸ್ಸಿಗೆ ನೋವಾಗಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಧನಾಗಮನಕ್ಕೆ ಕೊರತೆಯಾಗದು.
ಕನ್ಯಾ: ಆರ್ಥಿಕವಾಗಿ ಹಣಕಾಸಿನ ಮುಗಟ್ಟಿನಿಂದ ಕಾರ್ಯಕ್ಷೇತ್ರದಲ್ಲಿ ಅಂದುಕೊಂಡ ಕೆಲಸ ಕಾರ್ಯಗಳಿಗೆ ವಿಘ‍್ನಗಳು ಎದುರಾದೀತು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ವೈಮನಸ್ಯವುಂಟಾದೀತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.
ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲು ಓಡಾಟ ನಡೆಸಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವಿರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.
ವೃಶ್ಚಿಕ: ವೃತ್ತಿರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಗೋಚರವಾಗಲಿದೆ. ಆರ್ಥಿಕವಾಗಿ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿದೆ. ಆದಷ್ಟು ಮನಸ್ತಾಪಗಳು ಬಾರದಂತೆ ಎಚ್ಚರವಹಿಸಿ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು.
ಧನು: ಮನೆ, ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಭೂ ಖರೀದಿ ವ್ಯವಹಾರದಲ್ಲಿ ಲಾಭ ಗಳಿಸಬಹುದು. ಧನಾಗಮನಕ್ಕೆ ಕೊರತೆಯಿರದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೊರಲು ಸಿದ್ಧರಾಗಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಕರ: ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಉಂಟಾಗಬಹುದು. ದುಡುಕಿ ಮಾತನಾಡಿ ಪಶ್ಚಾತ್ತಾಪಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಬೆಲೆ ಸಿಗಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಿ.
ಕುಂಭ: ಸಾಂಸಾರಿಕವಾಗಿ ಮಡದಿಯ ಸಹಕಾರದಿಂದ ಬರುವಂತಹ ಕಷ್ಟಗಳನ್ನು ನಿಭಾಯಿಸುವ ಧೈರ್ಯ ಬರುವುದು. ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
ಮೀನ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಂಯಮ ಕಳೆದುಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರ ಪ್ರಶಂಸೆ ಸಿಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.