ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 30 ಡಿಸೆಂಬರ್ 2019 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಅನುಭವಕ್ಕೆ ಬರುವುದು. ದೂರ ಪ್ರಯಾಣದಿಂದಾಗಿ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ. ಕೂಡಿಟ್ಟ ಹಣ ಕಾಪಾಡಿಕೊಳ್ಳುವ ಚಿಂತೆ ಕಾಡಬಹುದು.  

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗಬಹುದು. ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಿಥುನ: ಮಿತ್ರರ ಕಷ್ಟಗಳಿಗೆ ಸ್ಪಂದಿಸುವಿರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ವ್ಯವಹಾರದಲ್ಲಿ ಮುನ್ನಡೆ ತೋರಿಬಂದೀತು. ಅಪರಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ದೂರ ಪ್ರಯಾಣ ಮಾಡಬೇಕಾದೀತು. ಪಾಲು ಬಂಡವಾಳ ಹೂಡಿಕೆ ಮಾಡಲು ಇದು ಸಕಾಲ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಸಾಲಗಾರರಿಂದ ಮುಕ್ತಿ ಸಿಗುವುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿ ನೀಡುವುದು. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡಬಹುದು.

ಕನ್ಯಾ: ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆ ಸಿಗಲಿದೆ. ತಾಳ್ಮೆಯಿಂದಿರಿ.

ತುಲಾ: ಕಾರ್ಯಕ್ಷೇತ್ರದಲ್ಲಿ ದುಡುಕಿನ ವರ್ತನೆಯಿಂದ ಅನಾಹುತ ತಂದುಕೊಳ್ಳುತ್ತೀರಿ. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮುನ್ನ ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ವಿಘ್ನಗಳು ತೋರಿಬಂದರೂ ನಿರಾಸೆ ಬೇಡ.

ವೃಶ್ಚಿಕ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆಯಿಂದ ವಿರಸ ಮೂಡಬಹುದು. ತಾಳ್ಮೆಯಿಂದಿರುವುದು ಮುಖ್ಯ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ಗೃಹ ಬಳಕೆ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ಅಡ್ಡಿ ಆತಂಕಗಳು ಎದುರಾಗಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಿರಿ. ಶುಭ ಮಂಗಲ ಕಾರ್ಯಗಳಿಗೆ ಸಿದ್ದತೆ ನಡೆಸಲಿದ್ದೀರಿ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ.

ಮಕರ: ಮನಸ್ಸಿನಲ್ಲಿರುವ ದುಃಖ ದುಮ್ಮಾನಗಳನ್ನು ಹಂಚಲು ಮಿತ್ರರ ನೆರವು ಪಡೆಯುವಿರಿ. ಅನಗತ್ಯ ವಿಚಾರಗಳಿಗೆ ಚಿಂತೆ ಮಾಡುವುದನ್ನು ಬಿಡಿ. ಹಿರಿಯರಿಗೆ ತೀರ್ಥ ಯಾತ್ರೆ ಮಾಡುವ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.

ಕುಂಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯ ಲಾಭವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಹಿರಿಯರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ.

ಮೀನ: ಹಿತಶತ್ರುಗಳ ಬಾಧೆ ಅಧಿಕವಾಗಬಹುದು. ಕುಲದೇವರ ಪ್ರಾರ್ಥನೆ ನಡೆಸಿ ಕಾರ್ಯರಂಗದಲ್ಲಿ ಮುಂದುವರಿಯಿರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ದೇವಾರಾಧನೆಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ