ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 31 ಡಿಸೆಂಬರ್ 2019 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸುವಿರಿ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ಭವಿಷ್ಯದ ಯೋಜನೆಗಳಿಗೆ ಧನ ವ್ಯಯ ಮಾಡುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡುವ ಅಗತ್ಯವಿದೆ.

ವೃಷಭ: ಕೃಷಿ ವ್ಯವಹಾರ ಮಾಡುವವರಿಗೆ ವ್ಯವಹಾರದಲ್ಲಿ ಅಧಿಕ ಲಾಭ ಸಿಗಲಿದೆ. ಸಣ್ಣ ವ್ಯಾಪಾರಿಗಳಿಗೆ ಸಣ್ಣ ಮಟ್ಟಿನ ಲಾಭವಾಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ಅಗತ್ಯ. ಅಪರಿಚಿತರ ಬಗ್ಗೆ ಎಚ್ಚರವಾಗಿರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಓಡಾಡಬೇಕಾದೀತು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

ಕರ್ಕಟಕ: ಇಂಜಿನಿಯರಿಂಗ್ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ವಾಹನ ರಿಪೇರಿಗಾಗಿ ಧನವ್ಯಯವಾದೀತು. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ದಾಂಪತ್ಯದಲ್ಲಿ ವಿರಸ ಮೂಡೀತು. ತಾಳ್ಮೆ ಅಗತ್ಯ.

ಸಿಂಹ: ಸಂಗಾತಿಯ ಸಮಯೋಚಿತ ಸಲಹೆಗಳನ್ನು ಅಲಕ್ಷಿಸಿ ಮುನ್ನಡೆದರೆ ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾದೀತು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಾನಾ ರೀತಿಯಲ್ಲಿ ಧನ ವ್ಯಯವಾಗಬಹುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.

ಕನ್ಯಾ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಂಡುಬಂದೀತು. ವೈಯಕ್ತಿಕ ಆರೋಗ್ಯದ ಬಗ್ಗೆ ನಿರ್ಲ್ಯಕ್ಷ ಬೇಡ. ವೃತ್ತಿರಂಗದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಬಹುದು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ.

ತುಲಾ: ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಮನಸ್ತಾಪವಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಾಹನ ಸವಾರರು ಅಪಘಾತದ ಬಗ್ಗೆ ಎಚ್ಚರವಾಗಿರಬೇಕು. ಸಕಾರಾತ್ಮಕ ಯೋಚನೆಗಳಿಂದ ಸಮಸ್ಯೆಗಳ ಪರಿಹಾರಕ್ಕೆ ಹೊಸ ದಾರಿ ಸಿಗಬಹುದು.

ವೃಶ್ಚಿಕ: ನಿರುದ್ಯೋಗಿಗಳು ಸ್ವಂತ ವೃತ್ತಿ, ವ್ಯವಹಾರಗಳನ್ನು ನಡೆಸುವ ನಿರ್ಧಾರ ಮಾಡಲಿದ್ದಾರೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಆರ್ಥಿಕವಾಗಿ ಆದಾಯದಲ್ಲಿ ವೃದ್ಧಿಯಾಗಬಹುದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಧನು: ಆಕಸ್ಮಿಕವಾಗಿ ಹಳೆಯ ಮಿತ್ರರ ಭೇಟಿಯಾಗುವಿರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ತಕ್ಕ ಫಲ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕೊರತೆ ಕಂಡುಬರಬಹುದು. ತಾಳ್ಮೆ ಅಗತ್ಯ.

ಮಕರ: ಹೊಸ ಕೆಲಸಗಳಿಗೆ ಕೈ ಹಾಕುವಾಗ ವಿಘ‍್ನಗಳು ಎದುರಾಗಲಿವೆ. ಕೃಷಿ ಚಟುವಟಿಕೆಗಳಿಗೆ ಅಡೆತಡೆಗಳುಂಟಾಗಬಹುದು. ವೈದ್ಯಕೀಯ ವೃತ್ತಿಯವರಿಗೆ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಮೇಲ್ವರ್ಗದ ಅಧಿಕಾರಿಗಳಿಗೆ ಕಾರ್ಯದೊತ್ತಡ ಹೆಚ್ಚಾಗಲಿದೆ. ನಿರೀಕ್ಷಿತ ಕೆಲಸ ಕಾರ್ಯಗಳು ಅಂದುಕೊಂಡಂತೇ ನಡೆಯಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರಯಾಣದಲ್ಲಿ ವಂಚನೆಯ ಭೀತಿಯಿರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಮನೆಯಲ್ಲಿ ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ಕಂಡುಬರಲಿವೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಭಿನ್ನಾಭಿಪ್ರಾಯ ಕಂಡುಬರಬಹುದು. ದುಡುಕಿನ ವರ್ತನೆ ತೋರದಿರಿ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ