ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 24 ಜನವರಿ 2020 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ, ವೃತ್ತಿ ರಂಗದಲ್ಲಿ ಬರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ಮಿತ್ರರ ಸಹಾಯ ಪಡೆಯುವಿರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಸಮರಸವಿರಲಿದೆ. ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು.

ವೃಷಭ: ಅನಿರೀಕ್ಷಿತವಾಗಿ ಬಾಕಿ ಹಣ ಸಂದಾಯವಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮಗೊಳ್ಳಲಿದೆ. ಹೊಸ ಯೋಜನೆಗಳಿಗೆ ಕೈಹಾಕಲು ಇದು ಸಕಾಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ.

ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶ ಮಾಡಿಕೊಡದಿರಿ. ನಿಮಗೆ ಇಷ್ಟವಿಲ್ಲದಿದ್ದರೂ ಬೇರೆಯವರ ಒತ್ತಾಯಕ್ಕೆ ಕೆಲಸ ಮಾಡಬೇಕಾಗಿ ಬರುತ್ತದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ದೇಹಾಯಾಸದಿಂದಾಗಿ ಅನಾರೋಗ್ಯ ಉಂಟಾಗಬಹುದು. ಪ್ರೀತಿಯ ಮಿತ್ರನನ್ನು ಕಳೆದುಕೊಂಡ ದುಃಖ ಕಾಡಬಹುದು. ದುರ್ಜನರ ನಯ ಮಾತುಗಳಿಗೆ ಮರುಳಾಗಬೇಡಿ. ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಯಾರಿಂದಲೂ ತಡೆಯಲಾಗದು.

ಸಿಂಹ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗುವುದರಿಂದ ಆರಂಭಿಸಿದ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ತಾಳ್ಮೆ ಹಾಗೂ ಸಮಾಧಾನದಿಂದ ಮುಂದುವರಿಯಬೇಕು. ಸಂಗಾತಿಯ ಸಲಹೆಗೆ ಕಿವಿಗೊಡಿ. ಹಿರಿಯರಿಗೆ ತೀರ್ಥಯಾತ್ರೆಯ ಯೋಗವಿದೆ.

ಕನ್ಯಾ: ಸರಕಾರಿ ಅಧಿಕಾರಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಕೆಟ್ಟ ಗೆಳೆಯರ ಸಂಗದಿಂದ ದೂರವಿದ್ದರೇ ಉತ್ತಮ. ಅನಿರೀಕ್ಷಿತವಾಗಿ ಹಣಕಾಸಿನ ವಿಚಾರದಲ್ಲಿ ಖರ್ಚು ವೆಚ್ಚಗಳಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಅನಾರೋಗ್ಯ ಕಾಡಲಿದ್ದು, ದೇಹ ಹೈರಾಣಾಗಬಹುದು. ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಕುಲದೇವರ ಪ್ರಾರ್ಥಿಸಿ.

ವೃಶ್ಚಿಕ: ವಿದ್ಯಾರ್ಥಿಗಳು, ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತಿ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಕೃಷಿಕರಿಗೆ ಬಹುದಿನಗಳ ಕನಸು ಈಡೇರಿದ ಸಂತಸ ಸಿಗಲಿದೆ.

ಧನು: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಾಗಿರಿ. ನಿಮ್ಮ ಒಳ್ಳೆಯ ಮನಸ್ಸನ್ನು ದುರುಪಯೋಗಪಡಿಸಿಕೊಳ್ಳುವವರ ಬಗ್ಗೆ ಎಚ್ಚರವಾಗಿರಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಎದುರಾಗಬಹುದು. ಕಿರು ಸಂಚಾರ ಯೋಗವಿದೆ.

ಮಕರ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ನೀವು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರಲಿವೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ.  ಟೀಕೆಗಳಿಗೆ ತಲೆಕೆಡಿಸಿಕೊಳ್ಳಬೇಡಿ.

ಕುಂಭ: ಸಾಂಸಾರಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಿ ಸಾಮರಸ್ಯ ಮೂಡಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ದತೆ ನಡೆಸುವಿರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ಮಾಡುವಿರಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಸಾಂಸಾರಿಕವಾಗಿ ಶಾಂತಿ, ಸಮಾಧಾನವಿರಲಿದೆ. ವಿದ್ಯಾರ್ಥಿಗಳು ಪ್ರಯತ್ನಬಲಕ್ಕೆ ತಕ್ಕ ಫಲ ಪಡೆಯುವರು. ಸಣ್ಣ ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ