ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 2 ಫೆಬ್ರವರಿ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರಿಗೆ ನಿರೀಕ್ಷಿತ ರೀತಿಯಲ್ಲಿ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಪ್ರೀತಿ ಪಾತ್ರರ ಭೇಟಿಯಾಗುವಿರಿ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ತೋರಿಬಂದರೂ ಅಂತಿಮ ಜಯ ನಿಮ್ಮದಾಗುವುದು. ಉದ್ದೇಶಿತ ಕೆಲಸಗಳನ್ನು ಈಡೇರಿಸುವಿರಿ. ಸಂಗಾತಿಯ ದೇಹಾರೋಗ್ಯದ ಕಡೆಗೆ ಕಾಳಜಿಯಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ಮಿಥುನ: ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ಆದರೆ ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಾಗುವಿರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರುವುದು. ಆಕಸ್ಮಿಕವಾಗಿ ಧನಲಾಭವಾಗಲಿದ್ದು, ಅಂದುಕೊಂಡ ಕಾರ್ಯ ನೆರವೇರಿಸುವಿರಿ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಯಶಸ್ಸು ಸಿಗಲಿದೆ.

ಸಿಂಹ: ಯೋಜಿತ ಕೆಲಸಗಳಿಗೆ ಚಾಲನೆ ಸಿಕ್ಕಿ ಉತ್ತಮ ಫಲ ನಿರೀಕ್ಷಿಸಬಹುದು. ಸಾಂಸಾರಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕುವಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕಾಗುತ್ತದೆ. ಬಂಧು ಮಿತ್ರರ ಆಗಮನವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ಇಂದು ನೀವು ಯಾರೊಂದಿಗೇ ಆದರೂ ಹಣಕಾಸಿನ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಬೇಕು. ಸಾಲ ಕೊಟ್ಟರೆ ಮರಳಿ ಬಾರದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಶೆಯಾಗಬಹುದು. ವಾಹನಾಪಘಾತದ ಭಯವಿದೆ.

ತುಲಾ: ರಾಜಕೀಯ ಕ್ಷೇತ್ರದಲ್ಲಿರುವವರು ಉತ್ತಮ ಸ್ಥಾನ ಮಾನ ಪಡೆದು ಅಭಿವೃದ್ಧಿ ಹೊಂದಲಿದ್ದಾರೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.

ವೃಶ್ಚಿಕ: ವೃತ್ತಿರಂಗದಲ್ಲಿ ಬೇಡದ ಅಪವಾದಕ್ಕೆ ಗುರಿಯಾಗುವಿರಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆಸ್ತಿ ವಿವಾದಗಳಿಗೆ ಹಿರಿಯರ ಮಧ್ಯಸ್ಥಿಕೆ ಸೂಕ್ತ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ವಿದ್ಯಾರ್ಥಿಗಳಿಗೆ ಪ್ರಯತ್ನಬಲಕ್ಕೆ ತಕ್ಕ ಯಶಸ್ಸು ಸಿಗಲಿದೆ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಿ. ದೂರ ಸಂಚಾರ ಮಾಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ವೃತ್ತಿರಂಗದಲ್ಲಿ ಅಭಿವೃದ್ಧಿ ಅನುಭವಕ್ಕೆ ಬರುವುದು. ಹಣಕಾಸಿನ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವಿರಿ. ಯೋಗ್ಯ ವಯಸ್ಕರಿಗೆ ಶೀಘ್ರ ವಿವಾಹ ಭಾಗ್ಯವಿದೆ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

ಕುಂಭ: ಹಿರಿಯರಿಂದ ಬಳವಳಿ ನಷ್ಟವಾಗುವ ಭೀತಿ ಕಾಡಲಿದೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಪ್ರಗತಿ ಕಂಡುಬರಲಿದೆ.

ಮೀನ: ಹಂತ ಹಂತವಾಗಿ ನಿಮ್ಮ ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿಬರಲಿದ್ದು, ಸಾಲಗಾರರಿಂದ ಮುಕ್ತಿ ಸಿಗಲಿದೆ. ಆದರೆ ದುಡುಕು ಮಾತು, ವರ್ತನೆಗೆ ಕಡಿವಾಣ ಹಾಕಬೇಕಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ. ನೂತನ ದಂಪತಿಗೆ ಸಂತಾನ ಫಲ ಸೂಚನೆ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ