ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 4 ಫೆಬ್ರವರಿ 2020 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ ವ್ಯವಹಾರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದಾಗಿ ಮನಸ್ಸಿಗೆ ಕಿರಿ ಕಿರಿಯಾಗಬಹುದು. ಮೇಲ್ವರ್ಗದ ಅಧಿಕಾರಿಗಳಿಗೆ ಉನ್ನತ ಹುದ್ದೆಯ ಸ್ಥಾನ ಮಾನ ಸಿಗಲಿದೆ. ಧರ್ಮಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಾಗುವ ಘಟನೆಗಳು ನಡೆಯಲಿವೆ. ಹಣಕಾಸಿನ ಅಡಚಣೆ ಕಂಡುಬಂದರೂ ಕಷ್ಟ ಕಾಲದಲ್ಲಿ ಸ್ನೇಹಿತರ ಸಹಾಯ ಒದಗಿಬರಲಿದೆ. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ವಾಹನ ಸಂಚಾರ ಮಾಡುವಾಗ ಅಪಘಾತವಾಗದಂತೆ ಎಚ್ಚರಿಕೆ ವಹಿಸುವುದು ಸೂಕ್ತ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ.

ಕರ್ಕಟಕ: ಯಾವುದೇ ಕೆಲಸ ಆರಂಭಿಸುವ ಮೊದಲು ಗುರು ಹಿರಿಯರ ಸಲಹೆ ಸೂಚನೆಗೆ ಕಿವಿಗೊಡಿ. ಆಸ್ತಿ ವಿವಾದಗಳು ಬಗೆಹರಿಯಲಿವೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಬಂದರೂ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಸಿಂಹ: ಸಾಂಸಾರಿಕವಾಗಿ ಇದುವರೆಗೆ ಇದ್ದ ಕಷ್ಟಗಳು ದೂರವಾಗಿ ಉತ್ತಮ ಫಲಗಳು ಗೋಚರವಾಗಲಿದೆ. ದೈವಾನುಗ್ರಹದಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಕನ್ಯಾ: ನಿರ್ಧಾರಗಳನ್ನು ಕೈಗೊಳ್ಳುವಾಗ ಮಾನಸಿಕವಾಗಿ ಗೊಂದಲ, ಧ್ವಂದ್ವ ಮನಸ್ಥಿತಿ ಕಾಡಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡುವುದು ಉತ್ತಮ. ಸ್ವಯಂಕೃತ ಅಪರಾಧಕ್ಕೆ ಪಶ್ಚಾತ್ತಾಪ ಪಡಬೇಕಾದೀತು. ದುಡುಕಿನ ವರ್ತನೆ ಬೇಡ. ದೇವರ ದರ್ಶನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ವ್ಯಾಪಾರಿ ವರ್ಗದವರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಉತ್ತಮ. ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ಬರಲಿದೆ. ತಾಳ್ಮೆಯಿಂದಿರಿ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಅವಿವಾಹಿತ ಸೋದರಿಯ ವಿವಾಹ ಪ್ರಸ್ತಾಪಕ್ಕೆ ಮುನ್ನಡೆ ಸಿಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ನೂತನ ಕೆಲಸ ಕಾರ್ಯಗಳಿಗೆ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದೇ.

ಧನು: ವೃತ್ತಿರಂಗದಲ್ಲಿ ನಿಮ್ಮ ಪ್ರಯತ್ನಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಹಲವು ಉದ್ಯೋಗಾವಕಾಶಗಳು ದೊರೆಯಲಿವೆ. ಜಾಣ್ಮೆಯಿಂದ ಬಳಸಿಕೊಳ್ಳಿ.

ಮಕರ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಆರ್ಥಿಕವಾಗಿ ಆದಾಯ ದ್ವಿಗುಣವಾಗಲಿದೆ. ಆಸ್ತಿ, ಮನೆ ಖರೀದಿಗೆ ಇದು ಸಕಾಲ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಮೆಚ್ಚುಗೆ ವ್ಯಕ್ತವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ನಿರುದ್ಯೋಗಿಗಳಿಗೆ ಉದ್ಯೋಗ ಸಂಬಂಧವಾಗಿ ದೂರ ಸಂಚಾರ ಮಾಡಬೇಕಾಗಬಹುದು. ಆರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾಗಬಹುದು. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮೀನ: ಮಾತಿನ ಮೇಲೆ ನಿಗಾ ಇರಲಿ. ಮಾತಿನಲ್ಲೇ ಮರುಳು ಮಾಡುವವರ ಬಗ್ಗೆ ಎಚ್ಚರ. ಕೋಪದ ಕೈಗೆ ಬುದ್ಧಿ ಕೊಡಬೇಡಿ. ವಿದ್ಯಾರ್ಥಿಗಳಲ್ಲಿ ಉತ್ಸಾಹ ಕಂಡುಬರಲಿದೆ. ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಿರದು. ಆದರೆ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ